ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಭಾರೀ ಹಣಕಾಸು ಪರಿಹಾರ ಪ್ಯಾಕೇಜ್ ಘೋಷಿಸಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ ಕುರಿತು ಪ್ರಕಟಿಸಿದ್ದಾರೆ.
ಪತ್ರಿಕಾಗೋಷ್ಠಿ ಮೂಲಕ ಮಹತ್ವದ ಘೋಷಣೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದ್ದರು. ಈ ವೇಳೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ ಘೋಷಿಸಿದರು.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಒಟ್ಟು ವೆಚ್ಚ ಈಗ 2,27,841 ಕೋಟಿ ರೂಪಾಯಿಗೆ ತಲುಪಿದೆ. ಸಾಂಕ್ರಾಮಿಕ ರೋಗದ ನಡುವೆ ದುರ್ಬಲ ವರ್ಗದವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಈ ಯೋಜನೆ ಸಹಾಯ ಮಾಡುತ್ತದೆ.

ಕಳೆದ ವರ್ಷದ ರೀತಿಯಲ್ಲೇ ಈ ವರ್ಷ ಕೂಡ ಬಡವರಿಗೆ ಉಚಿತ ಆಹಾರ ಧಾನ್ಯ ಕೊಡಲಾಗುತ್ತದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿ 2021 ಮೇ ನಿಂದ ನವೆಂಬರ್ವರೆಗೆ ಉಚಿತ ಧಾನ್ಯ ವಿತರಣೆ ನಡೆಯಲಿದೆ. ಈ ಮೂಲಕ ಆಗುವ 94,000 ಕೋಟಿ ರೂ. ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತದೆ. ಈ ಯೋಜನೆಯ ಒಟ್ಟು ಮೊತ್ತ ಇದೀಗ 2.28 ಲಕ್ಷ ಕೋಟಿಗೆ ಏರಿಕೆಯಾದಂತಾಗುತ್ತದೆ.
ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಲ್ಲಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು ನವೆಂಬರ್ ಅಂತ್ಯದವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಣಯದಿಂದ ದೇಶದ ಸುಮಾರು 80 ಕೋಟಿ ಫಲಾನುಭವಿಗಳು ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಪಡೆಯಬಹುದಾಗಿದೆ.


Click it and Unblock the Notifications