For Quick Alerts
ALLOW NOTIFICATIONS  
For Daily Alerts

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ: ಒಟ್ಟು ವೆಚ್ಚ 2,27,841 ಕೋಟಿ

|

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಭಾರೀ ಹಣಕಾಸು ಪರಿಹಾರ ಪ್ಯಾಕೇಜ್ ಘೋಷಿಸಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ ಕುರಿತು ಪ್ರಕಟಿಸಿದ್ದಾರೆ.

 

ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ: 1.1 ಲಕ್ಷ ಕೋಟಿ ರೂ.ಗಳ ಸಾಲ ಖಾತರಿ ಯೋಜನೆ

ಪತ್ರಿಕಾಗೋಷ್ಠಿ ಮೂಲಕ ಮಹತ್ವದ ಘೋಷಣೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್‌ ನೀಡಿದ್ದರು. ಈ ವೇಳೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ ಘೋಷಿಸಿದರು.

ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಒಟ್ಟು ವೆಚ್ಚ ಈಗ 2,27,841 ಕೋಟಿ ರೂಪಾಯಿಗೆ ತಲುಪಿದೆ. ಸಾಂಕ್ರಾಮಿಕ ರೋಗದ ನಡುವೆ ದುರ್ಬಲ ವರ್ಗದವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಈ ಯೋಜನೆ ಸಹಾಯ ಮಾಡುತ್ತದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ: 2,27,841 ಕೋಟಿ ರೂ

ಕಳೆದ ವರ್ಷದ ರೀತಿಯಲ್ಲೇ ಈ ವರ್ಷ ಕೂಡ ಬಡವರಿಗೆ ಉಚಿತ ಆಹಾರ ಧಾನ್ಯ ಕೊಡಲಾಗುತ್ತದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿ 2021 ಮೇ ನಿಂದ ನವೆಂಬರ್​ವರೆಗೆ ಉಚಿತ ಧಾನ್ಯ ವಿತರಣೆ ನಡೆಯಲಿದೆ. ಈ ಮೂಲಕ ಆಗುವ 94,000 ಕೋಟಿ ರೂ. ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತದೆ. ಈ ಯೋಜನೆಯ ಒಟ್ಟು ಮೊತ್ತ ಇದೀಗ 2.28 ಲಕ್ಷ ಕೋಟಿಗೆ ಏರಿಕೆಯಾದಂತಾಗುತ್ತದೆ.

ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಲ್ಲಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು ನವೆಂಬರ್ ಅಂತ್ಯದವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಣಯದಿಂದ ದೇಶದ ಸುಮಾರು 80 ಕೋಟಿ ಫಲಾನುಭವಿಗಳು ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಪಡೆಯಬಹುದಾಗಿದೆ.

English summary

Extension Of Pradhan Mantri Gareeb Kalyan Yojana: Nirmala Sitharaman

With the extension, the total cost of the Pradhan Mantri Gareeb Kalyan Yojana now stands at 2,27,841 crore. The scheme entails to providing free food grains to the vulnerable sections amid the pandemic
Story first published: Monday, June 28, 2021, 17:24 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X