ರಿಲಯನ್ಸ್ ಜಿಯೋ ಭಾರತದ ಅಗ್ರಮಾನ್ಯ ಟೆಲಿಕಾಂ ಸಂಸ್ಥೆಗಳಲ್ಲಿ ಒಂದು. ಕೋಟಿಗಟ್ಟಲೇ ಗ್ರಾಹಕರನ್ನು ಒಳಗೊಂಡಿರುವ ಜಿಯೋ ಏಷ್ಯಾದ ಎರಡನೇ ಶ್ರೀಮಂತ ವ್ಯಕ್ತಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಒಡೆತನದಲ್ಲಿದೆ. ಆದರೆ ಸಾಮಾಜಿಕ ಜಾಲತಾಣಗಳ ದೈತ್ಯ ಫೇಸ್ ಬುಕ್ ಇದನ್ನು ಖರೀದಿಗೆ ಮನಸ್ಸು ಮಾಡಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ಫೇಸ್ಬುಕ್ ಸಾವಿರಾರು ಕೋಟಿ ರುಪಾಯಿ ಮೌಲ್ಯದ ರಿಲಯನ್ಸ್ ಇಂಡಸ್ಟ್ರೀಸ್ ಪಾಲನ್ನು ಖರೀದಿಸಲು ಯೋಜಿಸುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ನ ಎನ್ಎಸ್ಐ (ನಿಫ್ಟಿ) 6.51 ಪರ್ಸೆಂಟ್ ಷೇರುಗಳು ಬಹು ಬಿಲಿಯನ್ ಪಾಲನ್ನು ಖರೀದಿಸಲು ಮಾತುಕತೆ ನಡೆಸುತ್ತಿದೆ ಎಂದು ಫೈನಾನ್ಷಿಯಲ್ ಟೈಮ್ಸ್ ಮಂಗಳವಾರ ವರದಿ ಮಾಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಪಾಲಿನ ಜೊತೆಗೆ ಭಾರತದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯವರ ನಿಯಂತ್ರಣದಲ್ಲಿರುವ ಜಿಯೋದಲ್ಲಿ 10 ಪರ್ಸೆಂಟ್ ಪಾಲನ್ನು ಪಡೆಯಲು ಫೇಸ್ಬುಕ್ ಪ್ರಯತ್ನಿಸುತ್ತಿದೆ ಎಂದು ttps://on.ft.com/2wyFwc1 ಹೇಳಿದೆ. ಆದರೆ ಕೊರೊನಾವೈರಸ್ ಜಾಗತಿಕವಾಗಿ ಹರಡಿರುವುದರಿಂದ , ಹಾಗೂ ಜಾಗತಿಕ ಪ್ರಯಾಣವೂ ನಿಷೇಧದಿಂದಾಗಿ ಮಾತುಕತೆ ಏಕಾಏಕಿ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.
ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್ ಲಕ್ಷಾಂತರ ಕೋಟಿ ರುಪಾಯಿ ಕೊಟ್ಟು ವಾಟ್ಸಾಪ್ ಖರೀದಿ ಮಾಡಿದ್ದರು. ತನ್ನ ಬಿಜಿನೆಸ್ ಪಾಲನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವತ್ತ ಎದುರು ನೋಡುತ್ತಿರುವ ಫೇಸ್ಬುಕ್ ಇದೀಗ ಜಿಯೋ ಮೇಲೂ ಕಣ್ಣಿಟ್ಟಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications