For Quick Alerts
ALLOW NOTIFICATIONS  
For Daily Alerts

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರನ್ನ ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

|

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನ ಠೇವಣಿದಾರರನ್ನ ಭೇಟಿ ಮಾಡಿ ಮಾತನಾಡಿಸಿದ್ದಾರೆ. ಇದೇ ವೇಳೆ ಬ್ಯಾಂಕ್ ಅನುಸರಿಸುತ್ತಿರುವ ಕಾರ್ಯ ವಿಧಾನವನ್ನು ನಿರ್ವಾಹಕರು ತನ್ನ ವರದಿಯನ್ನ ಆರ್‌ಬಿಐಗೆ ಸಲ್ಲಿಸಿದ ಬಳಿಕ ಈ ವಿಷಯವನ್ನು ತ್ವರಿತಗೊಳಿಸಲು ಅವರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮೇಲೆ ಆರ್‌ಬಿಐ ಆರು ತಿಂಗಳು ನಿರ್ಬಂಧ ವಿಧಿಸಿತ್ತು. ಬ್ಯಾಂಕ್‌ ಗ್ರಾಹಕರಿಗೆ ನೀಡಿರುವ ಸಾಲದ ಪ್ರಮಾಣವು ಆರ್‌ಬಿಐ ಮಿತಿಗಿಂತ ಹೆಚ್ಚಾಗಿದ್ದು, ವಸೂಲಾಗದ ಸಾಲ (ಎನ್‌ಪಿಎ) ಮಟ್ಟವು ನಿಗದಿತ ಮಿತಿಗಿಂತ ಹೆಚ್ಚಾಗಿದೆ.

ವಿತ್ತ ಸಚಿವೆ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದ ಪಾಲಿನ ಜಿಎಸ್‌ಟಿ ಪರಿಹಾರ ಬಾಕಿ 11,800 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆಯೂ ಮನವಿ ಮಾಡಿಕೊಂಡಿದ್ದಾರೆ.

ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರನ್ನ ಭೇಟಿ ಮಾಡಿದ ಸೀತಾರಾಮನ್!

ಭೇಟಿ ವೇಳೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವಂತೆ ಸೀತಾರಾಮನ್ ಅವರಲ್ಲಿ ಬಸವರಾಜ್‌ ಬೊಮ್ಮಾಯಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್‌ ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು. ಇದಕ್ಕೆ ಪ್ರತಿಯಾಗಿ ಕೇಂದ್ರ ಹಣಕಾಸು ಸಚಿವರಿಗೆ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದರು.

ಇದಾದ ಬಳಿಕ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್ ''ಅಡುಗೆ ಎಣ್ಣೆಯ ಮೇಲೆ ಭಾರತದ ಅವಲಂಬನೆ ತುಂಬಾ ಹೆಚ್ಚಾಗಿದೆ. ಅಡುಗೆ ಎಣ್ಣೆ ತೈಲ ಬೀಜ ಉತ್ಪಾದನೆಯ ಮೇಲೆ ಪರಿಣಾಮ ಬೀರಿದ ನಂತರ ಖಾದ್ಯ ತೈಲ ಬೆಲೆಗಳು ಏರಿತು. ಕಳೆದ ವರ್ಷ, ಕಚ್ಚಾ ಮತ್ತು ಸಂಸ್ಕರಿಸಿದ ತಾಳೆ ಎಣ್ಣೆಯ ಆಮದನ್ನು ನಿಲ್ಲಿಸಲಾಯಿತು ಆದರೆ ಈಗ ಅದನ್ನು ಪುನರಾರಂಭಿಸಲಾಗಿದೆ. ಇದು ಅಡುಗೆ ಎಣ್ಣೆಯ ಬೆಲೆಗಳನ್ನು ಕಡಿಮೆ ಮಾಡುತ್ತದೆ'' ಎಂದು ಹೇಳಿದ್ದಾರೆ

ಇತ್ತೀಚೆಗಷ್ಟೇ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕೋವಿಡ್-19 ಎರಡನೇ ತರಂಗದಿಂದ ತತ್ತರಿಸಿರುವ ಭಾರತದ ಅರ್ಥವ್ಯವಸ್ಥೆಗೆ ಬೂಸ್ಟ್‌ ನೀಡಲು ಕೆಲವು ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಕೋವಿಡ್ -19 ಪೀಡಿತ ಪ್ರದೇಶಗಳಿಗೆ 1.1 ಲಕ್ಷ ಕೋಟಿ ರೂ.ಗಳ ಸಾಲ ಖಾತರಿ ಯೋಜನೆ, ಆರೋಗ್ಯ ಕ್ಷೇತ್ರಕ್ಕೆ 50,000 ಕೋಟಿ ರೂ., ಸಾರ್ವಜನಿಕ ಆರೋಗ್ಯಕ್ಕಾಗಿ 23,220 ಕೋಟಿ ರೂ., ಇತರ ಕ್ಷೇತ್ರಗಳಿಗೆ 60,000 ಲಕ್ಷ ಕೋಟಿ ರೂ. ಘೋಷಿಸಿದ್ದು, ನಷ್ಟ ಒತ್ತಡವನ್ನು ಕಡಿಮೆ ಮಾಡಲು ತಂತ್ರ ಹೆಣೆದಿದ್ದಾರೆ.

English summary

Finance Minister Nirmala Sitharaman Meets depositors of Guru Raghavendra bank in Bengaluru

Finance Minister Nirmala sitharaman meets depositors of Guru Raghavendra bank and says there is procedure that's being followed and she will do her best to expedite the matter
Story first published: Friday, July 2, 2021, 18:25 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X