ಪ್ರಧಾನಿ ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ: ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ನವದೆಹಲಿ, ಜೂನ್‌ 11: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ ಬಂಪರ್ ಘೋಷಣೆಯಾಗಿದ್ದು, 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

ಹೌದು ಮೋದಿ 3.0 ಸರ್ಕಾರದ ಕೇಂದ್ರ ಸಚಿವ ಸಂಪುಟವು ಸೋಮವಾರ ಸಂಜೆ ಮೊದಲ ಬಾರಿಗೆ ದೆಹಲಿಯ ಲೋಕ ಕಲ್ಯಾಣಮಾರ್ಗದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿಸಭೆ ನಡೆಸಿತು. ಸರ್ಕಾರದ ಪ್ರಮುಖ ವಸತಿ ಯೋಜನೆಯಾದ ಮೊದಲ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದಕ್ಕೂ ಮುನ್ನ ಸೋಮವಾರ ಬೆಳಗ್ಗೆ ಪ್ರಧಾನಿ ಮೋದಿ ಅವರು ಸುಮಾರು 9.3 ಕೋಟಿ ರೈತರಿಗೆ ಸುಮಾರು ₹ 20,000 ಕೋಟಿ ಬಿಡುಗಡೆ ಮಾಡಲು ಅಧಿಕಾರ ನೀಡುವ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದ್ದರು.

ಬಡವರಿಗೆ  3 ಕೋಟಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ

ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದನ್ನು ಮನಗಂಡು, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಪ್ರಧಾನಿ ಆವಾಸ್ ಯೋಜನೆಯಡಿ ಮೋದಿ ಸರ್ಕಾರ ಇದುವರೆಗೆ 4.21 ಕೋಟಿ ಮನೆಗಳನ್ನು ನಿರ್ಮಿಸಿದೆ.ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA)ದಡಿ ಈ ಯೋಜನೆ ಜಾರಿಗೆ ತರಲಾಗಿದೆ.

ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಆರಂಭಿಸಿದೆ.ಇದು ಅರ್ಹ ಫಲಾನುಭವಿಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು, ಖರೀದಿಸಲು ಅಥವಾ ನವೀಕರಿಸಲು ಹಣಕಾಸಿನ ನೆರವು ಮತ್ತು ಪ್ರೋತ್ಸಾಹವನ್ನು ನೀಡುತ್ತದೆ.

ಇದು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ) ಎಂಬ ಎರಡು ಪ್ರತ್ಯೇಕ ಘಟಕ ಹೊಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. EWS ಮತ್ತು LIG ಆದಾಯ ವರ್ಗಗಳಿಗೆ ಸೇರಿದ SC, ST ಮತ್ತು OBC ವರ್ಗಗಳಿಗೆ ಸೇರಿದ ಎಲ್ಲರೂ ಈ ಯೋಜನೆಯಡಿ ಅರ್ಹರಾಗಿರುತ್ತಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+