For Quick Alerts
ALLOW NOTIFICATIONS  
For Daily Alerts

ಜಿಎಸ್‌ಟಿ ದರ ಹೆಚ್ಚಳ ಕೇವಲ ಊಹಾಪೋಹ:ನಿರ್ಮಲಾ ಸೀತಾರಾಮನ್

|

ಸದ್ಯದಲ್ಲೇ ಜಿಎಸ್‌ಟಿ ದರಗಳನ್ನು ಹೆಚ್ಚಿಸಲಾಗುತ್ತದೆ ಎಂದು ಸುದ್ದಿಗಳು ಹರಿದಾಡುತ್ತಿದ್ದು ಇದು ಕೇವಲ ವದಂತಿ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಿಎಸ್‌ಟಿ ಸ್ಲ್ಯಾಬ್‌ಗಳನ್ನು ಹೊಸದಾಗಿ ಪರಿಚಯಿಸಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಲ್ಪಟ್ಟಂತೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಜಿಎಸ್‌ಟಿ ದರ ಹೆಚ್ಚಳವು ನನ್ನ ಕಚೇರಿಗಿಂತ ಹೊರಗಡೆಯೇ ಹೆಚ್ಚು ಸದ್ದು ಮಾಡುತ್ತಿದೆ ಎಂದಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು ಜಿಎಸ್‌ಟಿ ದರ ಗಣನೀಯವಾಗಿ ಹೆಚ್ಚವಾಗುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಜಿಎಸ್‌ಟಿ ದರ ಹೆಚ್ಚಳ ಕೇವಲ ಊಹಾಪೋಹ:ನಿರ್ಮಲಾ ಸೀತಾರಾಮನ್

ಡಿಸೆಂಬರ್ 18ರಂದು ಜಿಎಸ್‌ಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸದ್ಯ ಇರುವ ಜಿಎಸ್‌ಟಿ ದರಗಳನ್ನು ಬದಲಾಯಿಸಲಾಗುತ್ತದೆ ಎಂದೇ ಹೇಳಲಾಗುತ್ತಿತ್ತು. ಅಲ್ಲದೆ ಹೊಸ ವಸ್ತುಗಳು ಮತ್ತು ಸೇವೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲಾಗುವುದು ಎಂದು ವರದಿಯಾಗಿತ್ತು. ಆದರೆ ಇದೀಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇದೇ ವೇಳೆ ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರ ಮೊತ್ತವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಆಯಾ ಕಾಲಕ್ಕೆ ತಕ್ಕಂತೆ ಸಮರ್ಪಕವಾದ ಪ್ಯಾಕೇಜ್ ಘೋಷಿಸುವುದಾಗಿ ತಿಳಿಸಿದ್ದಾರೆ.

English summary

Fm Nirmala Sitharaman Said There Is No GST Hike

Nirmala Sitharaman said Haven't Discussed gst hike with my team yet.
Story first published: Saturday, December 14, 2019, 10:58 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X