ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದ ಕಂದಾಯ ಇಲಾಖೆ ಆಸ್ತಿಗಳ ನೋಂದಣಿಗೆ ಅಕ್ಟೋಬರ್ ತಿಂಗಳಿನಿಂದಲೇ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದೆ. ಇದು ಹಲವು ಗೊಂದಲಗಳಿಗೆ ಕಾರಣವಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯುವ ಕುರಿತು ಜನರು ಬಿಬಿಎಂಪಿ ಕಛೇರಿಗೆ ಅಲೆದಾಡುತ್ತಿದ್ದಾರೆ. ಈಗ ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ಹೊರೆಯ ಪ್ರಮಾಣಪತ್ರ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಜನರಿಗೆ ಕೊಂಚ ನೆಮ್ಮದಿಯನ್ನು ತಂದಿದೆ.
ಈ ಕುರಿತು ಮುನೀಶ್ ಮೌದ್ಗಿಲ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತರು (ಕಂದಾಯ) ಮಾಹಿತಿ ನೀಡಿದ್ದಾರೆ. ಜನರು ಇ-ಖಾತಾವನ್ನು ಪಡೆಯಲು ಹೊರೆಯ ಪ್ರಮಾಣಪತ್ರವನ್ನು ಸಲ್ಲಿಸುವ ಅಗತ್ಯವಿಲ್ಲ. ಮಂಗಳವಾರದಿಂದಲೇ ಈ ಬದಲಾವಣೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಜನರು ಇ-ಖಾತಾವನ್ನು ಪಡೆಯಲು https://BBMPeAasthi.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆಗ ಹೊರೆಯ ಪ್ರಮಾಣಪತ್ರವನ್ನು (Encumbrance Certificate) ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿತ್ತು. ಆದರೆ ಈ ನಿಯಮವನ್ನು ಬದಲಾವಣೆ ಮಾಡಲಾಗಿದೆ.
2004ಕ್ಕಿಂತ ಮೊದಲು ನೋಂದಣಿಯಾಗಿರುವ ಆಸ್ತಿಗಳ ಹೊರೆಯ ಪ್ರಮಾಣಪತ್ರವನ್ನು ನೀಡಲು ಮಧ್ಯವರ್ತಿಗಳು ಜನರಿಗೆ ಸುಮಾರು 5 ಸಾವಿರ ರೂ. ಶುಲ್ಕವನ್ನು ವಿಧಿಸುತ್ತಿದ್ದರು. ಈಗ ಹೊರೆಯ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡುವುದರಿಂದ ವಿನಾಯಿತಿ ನೀಡಿದ ಕಾರಣಕ್ಕೆ ಜನರಿಗೆ ಸಮಯ, ಹಣ ಉಳಿತಾಯವಾಗಲಿದೆ.
ಆದರೆ ಆಸ್ತಿಗಳ ಮಾರಾಟ ಮತ್ತು ನೋಂದಣಿ ಸಂದರ್ಭದಲ್ಲಿ ಹೊರೆಯ ಪ್ರಮಾಣಪತ್ರವನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಆದರೆ ಇ-ಖಾತಾವನ್ನು ಪಡೆಯಲು ಅರ್ಜಿ ಸಲ್ಲಿಕೆ ಮಾಡುವಾಗ ಮಾತ್ರ ಹೊರೆಯ ಪ್ರಮಾಣಪತ್ರವನ್ನು ಸಲ್ಲಿಸಬೇಕಿಲ್ಲ.
ಅಕ್ಟೋಬರ್ 29ರ ಮಂಗಳವಾರದಿಂದ ಇ-ಖಾತಾವನ್ನು ಪಡೆಯಲು ಅರ್ಜಿ ಸಲ್ಲಿಕೆ ಮಾಡುವಾಗ ಹೊರೆಯ ಪ್ರಮಾಣಪತ್ರವನ್ನು ಸಲ್ಲಿಸಬೇಕಿಲ್ಲ ಎಂಬ ನಿಯಮ ಜಾರಿಗೆ ಬರಲಿದೆ. ನಾವು ವೆಬ್‌ಸೈಟ್‌ನಲ್ಲಿ ಹೊರೆಯ ಪ್ರಮಾಣಪತ್ರವನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಆಯ್ಕೆಯಾಗಿ ನೀಡಲಿದ್ದೇವೆ. ಆದರೆ ಜನರು ಆಸ್ತಿ ಖರೀದಿ, ಮಾರಾಟ ಮಾಡುವಾಗ ಹೊರೆಯ ಪ್ರಮಾಣಪತ್ರವನ್ನು ಸಲ್ಲಿಸಬೇಕಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
ಬಿಬಿಎಂಪಿ ವೆಬ್‌ಸೈಟ್ ಮಾಹಿತಿಗಳ ಪ್ರಕಾರ ಇದುವರೆಗೂ 500 ಜನರು ಇ-ಖಾತಾವನ್ನು ಪಡೆದಿದ್ದಾರೆ ಮತ್ತು 5 ಲಕ್ಷ ಜನರು ಇ-ಖಾತಾ ಕರಡನ್ನು ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಸುಮಾರು 22 ಲಕ್ಷ ಆಸ್ತಿಗಳ ಕರಡು ಇ-ಖಾತಾವನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಕ್ಟೋಬರ್‌ನಿಂದಲೇ ಅವುಗಳು ಜನರಿಗೆ ಆನ್‌ಲೈನ್ ಮೂಲಕ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ.
2004ಕ್ಕೂ ಮೊದಲು ನೋಂದಣಿಯಾದ ಆಸ್ತಿಗಳ ಹೊರೆ ಪ್ರಮಾಣಪತ್ರವನ್ನು ಪಡೆಯಲು ಸಬ್ ರಿಜಿಸ್ಟಾರ್ ಆಫೀಸ್‌ಗಳಲ್ಲಿ ಸುಮಾರು 10 ದಿನಗಳು ಬೇಕಾಗಿವೆ. ಅದನ್ನು ಪಡೆದುಕೊಂಡು ಅಪ್‌ಲೋಡ್ ಮಾಡಿ ಇ-ಖಾತಾ ಪಡೆಯುವುದು ತುಂಬಾ ವಿಳಂಬವಾಗುತ್ತಿದೆ. ಆದ್ದರಿಂದ ಹೊರೆಯ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಬಾರದು ಎಂದು ಜನರು ಬಿಬಿಎಂಪಿಗೆ ಮನವಿ ಮಾಡಿದ್ದರು.
ಇ-ಖಾತಾಗಾಗಿ ಅರ್ಜಿ ಸಲ್ಲಿಸುವಾಗ 7 ದಿನಕ್ಕಿಂತ ಹಿಂದಿನ ಹೊರೆಯ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡಿದರೆ ಅದು ತೆಗೆದುಕೊಳ್ಳುತ್ತಿರಲಿಲ್ಲ. ಆದ್ದರಿಂದ ಜನರು ಕಂಗಾಲಾಗಿದ್ದರು. ಆದ್ದರಿಂದ ಇ-ಖಾತಾ ಪಡೆಯು ಹೊರೆಯ ಪ್ರಮಾಣಪತ್ರ ಬೇಡ ಎಂದು ಬೇಡಿಕೆ ಇಡಲಾಗಿತ್ತು.
ಇ-ಖಾತಾ ಪಡೆಯುವಾಗಲೂ ಹಲವಾರು ಸಮಸ್ಯೆಗಳು ಉಂಟಾಗುತ್ತಿವೆ. ಬಿಬಿಎಂಪಿ ಒಂದೊಂದನ್ನು ಬಗೆಹರಿಸುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲಾ ಪ್ರಕ್ರಿಯೆಗಳು ಆನ್‌ಲೈನ್‌ನಲ್ಲಿ ಸುಲಭವಾಗಿ ಸಾಧ್ಯವಾಗಲಿದೆ ಎಂದು ಜನರು ಅಂದಾಜಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ-2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದರೆ ಅಂತಿಮ ಇ-ಖಾತಾವನ್ನು ಪಡೆಯಲು ಈ ವಿಧಾನವನ್ನು ಅನುಸರಿಸಿ. ಜನರು ತಮ್ಮ ಸ್ವತ್ತಿನ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ತಿಳಿದುಕೊಳ್ಳಬಹುದು. ಅಂತಿಮ ಇ-ಖಾತಾ ಪಡೆಯಲು ಕೆಳಗಿನ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಿ/ ಅಪ್‌ಲೋಡ್ ಮಾಡಿ.
* ತಮ್ಮ ಸ್ವತ್ತಿನ ಆಸ್ತಿ ತೆರಿಗೆ ಅರ್ಜಿ ಸಂಖ್ಯೆಯ 10-ಅಂಕಿಗಳು
* ಮಾಲೀಕರ ಆಧಾರ್ ಆಧಾರಿತ ಇ-ಕೆವೈಸಿ (ಇ-ಖಾತಾ ನಲ್ಲಿರುವ ಎಲ್ಲಾ ಮಾಲೀಕರು ಇ-ಕೆವೈಸಿ ಮಾಡಬೇಕಾಗಿದೆ ಯಾವುದೇ ಮಾಲೀಕರು ಆಧಾರ್ ಹೊಂದಿಲ್ಲದಿದ್ದರೆ, ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಪಾಸ್‌ಪೋರ್ಟ್ ಅಥವಾ ಮತದಾರ ಗುರುತಿನ ಚೀಟಿ ಅಥವಾ ಚಾಲನಾ ಪರವಾನಗಿಯನ್ನು ಬಳಸಿ ದೃಢೀಕರಿಸಿ).
* ಮಾಲೀಕರು ಆಸ್ತಿಯನ್ನು ಪಡೆದ ನೋಂದಾಯಿತ ಪತ್ರ ಸಂಖ್ಯೆ (ಕ್ರಯ/ ದಾನ ಪತ್ರ ಇತ್ಯಾದಿ) (ಕಾವೇರಿ ತಂತ್ರಾಂಶದಿಂದ ನೋಂದಾಯಿತ ಪತ್ರ ಮಾಹಿತಿಯನ್ನು ಪಡೆಯಲಾಗುವುದು)
* ಆಸ್ತಿಯ ಹಕ್ಕು ನಿರೂಪಿಸುವ ನೋಂದಾಯಿತ ಪತ್ರವು, ನೋಂದಣಿ ದಿನಾಂಕದ ಒಂದು ದಿನದ ಹಿಂದಿನಿಂದ ದಿನಾಂಕ 18.10.2024ರವರೆಗೆ ಅಸ್ತಿಯ ಋಣಭಾರ ಪ್ರಮಾಣಪತ್ರ.
* ಆಸ್ತಿಯ ಮಾಲೀಕರು, ಆಸ್ತಿಯ ಹೊರಗೆ ಹಾಗೂ ಮುಂದೆ ನಿಂತಿರುವ ಆಸ್ತಿಯ ಛಾಯಾಚಿತ್ರ.
* ಬೆಸ್ಕಾಂ 10-ಅಂಕಿಯ ಅಕೌಂಟ್ ಐಡಿ (ಬೆಸ್ಕಾಂ ಬಿಲ್ ನೋಡಿ ಮತ್ತು ಖಾಲಿ ಭೂಮಿಗೆ ಕಡ್ಡಾಯವಲ್ಲ).
* ಬಿ.ಡಬ್ಲ್ಯೂ.ಎಸ್.ಎಸ್.ಬಿ (ಐಚ್ಛಿಕ).
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications