ಬೆಂಗಳೂರು: ''ಕೇಂದ್ರ ಸರ್ಕಾರ ಅನುಮೋದಿಸಿರುವ 17 ಬೆಳೆಗಳ ಬೆಂಬಲ ಬೆಲೆ ಸರಿಯಾಗಿಲ್ಲ. ಹೀಗಾಗಿ ಪರಿಸ್ಕೃತ ಬೆಲೆಯೊಂದಿಗೆ ದರ ನಿಗದಿ ಮಾಡಬೇಕು'' ಎಂದು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯಮಯ್ಯ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತು ಪತ್ರ ಬರೆದಿರುವ ಅವರು, ''ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಲಹೆ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ಬೆಂಬಲ ಬೆಲೆಯ ಮಾನದಂಡವನ್ನು ಮತ್ತೊಮ್ಮೆ ಪರಿಶೀಲಿಸಬೇಕು'' ಎಂದು ಒತ್ತಾಯಿಸಿದ್ದಾರೆ.
''ಈಗ ಬೆಂಬಲ ನಿಗದಿ ಮಾಡಿರುವ ಬೆಳೆಗಳನ್ನು ಬೆಳೆಯಲು ಸಾಮಾನ್ಯವಾಗಿ ಉತ್ಪಾದನಾ ವೆಚ್ಚ ಅವುಗಳಿಗೆ ನಿಗದಿ ಮಾಡಿರುವ ಬೆಲೆಯಷ್ಟೇ ಇದೆ. ಇದರಿಂದ ರೈತರಿಗೆ ಏನೂ ಲಾಭವಾಗುವುದಿಲ್ಲ. ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಂಬಲ ಬೆಲೆ ನಿಗದಿ ಮಾಡಬೇಕು'' ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

''ಕೇಂದ್ರ ಸರ್ಕಾರ ಕಳೆದ ಆರು ವರ್ಷದಿಂದ ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳುತ್ತಾ ಬಂದಿದೆ. ಅಲ್ಲದೇ ಬಜೆಟ್‌ನಲ್ಲಿ ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಲೆ ನೀಡುವುದಾಗಿ ಹೇಳಿದ್ದಿರಿ. ಆದರೆ, ಈಗ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 17 ಬೆಳೆಗಳ ಬೆಂಬಲ ಬೆಲೆ ನಿಮ್ಮ ಹೇಳಿಕೆಗಳಿಗೆ ವಿರುದ್ಧವಾಗಿದೆ. ಇದರಿಂದ ರೈತರು ಮತ್ತಷ್ಟು ಸಂಕಟದಲ್ಲಿ ಸುಲುಕಿಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಸಿ2 ನಿಯಮದಡಿ ಬೆಂಬಲ ಬೆಲೆಯನ್ನು ಘೋಷಣೆ ಮಾಡಿ ಬೆಳೆಗಾರರನ್ನು ಉಳಿಸಬೇಕು'' ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications