ಮಾರ್ಚ್ 18, 2026 ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ. ಈಗಾಗಲೇ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಯ ಸಿದ್ಧತೆಯಲ್ಲಿದ್ದಾರೆ. ಇದೀಗ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ, ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ನಿಗಮ (KSRTC) ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಹೌದು, ರಾಜ್ಯಾದ್ಯಂತ ಎಸ್‌ಎಲ್‌ಸಿ ಬರೆಯುವ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ದಿನಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಘೋಷಣೆ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!
ಮಾರ್ಚ್ 18, 2026 ರಿಂದ ಏಪ್ರಿಲ್ 2, 2026 ರವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಚೆ ನಡೆಯಲಿದೆ. ಈ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಅಂದರೆ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಉಚಿತವಾಗಿ ಕೆಎಸ್‌ಆರ್‌ಟಿಸಿ ಅಥವಾ ಅದರಡಿಯಲ್ಲಿ ಕಾರ್ಯನಿರ್ವಹಿಸುವ ಇತರ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.
ಫ್ರೀಯಾಗಿ ಹೋಗೋದು ಹೇಗೆ?
ವಿದ್ಯಾರ್ಥಿಗಳು ಬಸ್‌ಗಳಲ್ಲಿ ತಮ್ಮ ಹಾಲ್ ಟಿಕೆಟ್ ತೋರಿಸಿದ್ರೆ ಸಾಕು, ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಮರಳಿ ಬರಲು ಅವಕಾಶ ನೀಡಲಾಗಿದೆ. ಪರೀಕ್ಷಾ ಸಮಯದಲ್ಲಿ ಪ್ರಯಾಣದ ಒತ್ತಡ ಕಡಿಮೆ ಮಾಡಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಲುಪುವಂತೆ ಮಾಡುವುದೇ ಈ ಕ್ರಮದ ಮುಖ್ಯ ಉದ್ದೇಶವಾಗಿದೆ.
ಮಾರ್ಚ್ 18, 2026 ರಂದು ಕರ್ನಾಟಕದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಂದು ಆರಂಭವಾಗಲಿದೆ. ರಾಜ್ಯದ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSRAB) ನಿಗದಿಪಡಿಸಿದಂತೆ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2, 2026 ರವರೆಗ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅನ್ನುವಂತಹದ್ದು, ವಿದ್ಯಾರ್ಥಿಯ ಶೈಕ್ಷಣಿಕ ಜೀವನಲ್ಲಿ ಒಂದು ಮಹತ್ವದ ಘಟ್ಟವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದ್ದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪಾಸ್ ಮಾಡಬೇಕೆಂದರೆ ಸರಿಯಾದ ತಯಾರಿ, ಶಿಸ್ತು, ಆತ್ಮವಿಶ್ವಾಸ ಬಹಳ ಅಗತ್ಯ. ಆದ್ದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವವರು, ಓದಿಗಾಗಿ ಒಂದು ಟೈಂ ಟೇಬಲ್ ರಚಿಸಬೇಕು. ಆ ನಂತರ ಪ್ರತಿದಿನ 6 ರಿಂದ 8 ಗಂಟೆಗಳವರೆಗೆ ಓದುವುದನ್ನು ರೂಢಿಸಿಕೊಳ್ಳಿ. ಎಲ್ಲಾ ವಿಷಯಗಳಿಗೂ ಓದಲು ಸಮಾನ ಸಮಯ ನಿಗದಿಪಡಿಸಿ. ಅಲ್ಲದೇ ನಿಮಗೆ ಯಾವುದು ಕಷ್ಟ ಎನಿಸುತ್ತದೆಯೋ, ಅದನ್ನು ಹೆಚ್ಚು ಪ್ರಾಕ್ಟೀಸ್ ಮಾಡಿ.
ಇನ್ನು ಪ್ರತೀ ವಿಷಯಗಳಲ್ಲೂ ಪರೀಕ್ಷೆ ಬರೆಯುವಾಗ ಬಹಳ ಸ್ವಚ್ಛವಾಗಿ, ಪ್ರಶ್ನೆಗೆ ತಕ್ಕ ಉತ್ತರ ಬರೆಯಿರಿ. ಉತ್ತರ ಬರೆಯುವ ಮೊದಲು ಪ್ರಶ್ನೆಯನ್ನು ಮೊದಲು ಸರಿಯಾಗಿ ಓದಿಕೊಳ್ಳಿ. ಆ ನಂತರ ಹಂತ ಹಂತವಾಗಿ, ಸುಲಭವಾಗಿ ಅರ್ಥವಾಗುವಂತೆ ಉತ್ತರಗಳನ್ನು ಬರೆಯಲು ಆರಂಭಿಸಿ. ಪರೀಕ್ಷಾ ದಿನಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಆದ್ದರಿಂದ ನಾಳೆಯ ಪರೀಕ್ಷೆಗಾಗಿ ಇಂದು ಅಭ್ಯಾಸ ಮಾಡಿ. ಆಲ್ ದಿ ಬೆಸ್ಟ್...
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications