ಬೆಂಗಳೂರು, ಮೇ 25: ಬೆಂಗಳೂರು ನಿವಾಸಿಗಳಿಗೆ ಸಿಹಿ ಸುದ್ದಿ ಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಗರದಾದ್ಯಂತ ತನ್ನ ಎಲ್ಲಾ ಎಂಟು ವಲಯಗಳಲ್ಲಿ ಉಚಿತ ಸೇವೆಗಳನ್ನು ಒದಗಿಸುವ ಒಂದು ದಂತ ಚಿಕಿತ್ಸಾಲಯವನ್ನು ಪ್ರಾರಂಭಿಸಲು ಯೋಜಿಸುತ್ತಿದೆ.
ದುಬಾರಿ ಹಲ್ಲಿನ ಚಿಕಿತ್ಸೆ ಪಡೆಯಲು ಸಾಧ್ಯವಾಗದವರಿಗೆ ಈ ಯೋಜನೆ ವರದಾನವಾಗಲಿದೆ. ಮೊದಲು ಬಿಬಿಎಂಪಿ ವಲಯಗಳಲ್ಲಿ ಪ್ರಾಯೋಗಿಕವಾಗಿ ದಂತ ಚಿಕಿತ್ಸಾಲಯಗಳನ್ನು ತೆರೆಯಲಾಗುವುದು ಎಂದು ತಿಳಿದು ಬಂದಿದೆ.

"ನಾವು ಪ್ರಾಯೋಗಿಕವಾಗಿ ದಂತ ಚಿಕಿತ್ಸಾಲಯಗಳನ್ನು ತೆರೆಯುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದೇವೆ. ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವ ಬಡವರ ಕಲ್ಯಾಣಕ್ಕಾಗಿ ದಂತ ಚಿಕಿತ್ಸಾಲಯಗಳನ್ನು ತೆರೆಯುವ ಅಗತ್ಯತೆಯ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತರಿಗೆ ಮನವರಿಕೆ ಮಾಡಿಕೊಡಲಾಗಿದೆ. ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವ ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳ ಶುಲ್ಕಕ್ಕೆ ಸಮಾನವಾಗಿ ದಂತ ಸೇವೆಗಳನ್ನು ಒದಗಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸೈಯದ್ ಸಿರಾಜುದ್ದೀನ್ ಮದಿನಿ ಹೇಳಿದ್ದಾರೆ.
ದಿ ಮಿರರ್‌ಗೆ ನೀಡಿದ ಹೇಳಿಕೆ ಪ್ರಕಾರ, ದಂತ ಚಿಕಿತ್ಸಾಲಯಗಳಿಗೆ ಭೇಟಿ ನೀಡುವ ರೋಗಿಗಳ ಅನುಕೂಲಕ್ಕಾಗಿ ದಂತವೈದ್ಯರ ಸೇವೆಯನ್ನು ಪಡೆಯಲು ನಾವು ದಂತ ಕಾಲೇಜುಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಪಿ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಡೆಂಟಲ್ ಕ್ಲಿನಿಕ್ ಮತ್ತು ಫಿಸಿಯೋಥೆರಪಿ ಸೌಲಭ್ಯವನ್ನು ಹೊಂದುವ ಸಾಧ್ಯತೆಯಿದೆ, ಆದರೆ ಬಿಬಿಎಂಪಿ ಮುಖ್ಯ ಆಯುಕ್ತರ ಒಪ್ಪಿಗೆ ಪಡೆದ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ನಗರದಲ್ಲಿ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಬಿಬಿಎಂಪಿ 275 ಕೋಟಿ ರೂ. ಅನುಮೋದನೆ ನೀಡಿದೆ. ನಾವು ಹೊಸ ಸೌಲಭ್ಯಗಳನ್ನು ಸ್ಥಾಪಿಸಲು ನಿಧಿಯನ್ನು ಬಳಸಿಕೊಳ್ಳಲು ಯೋಚಿಸಿದ್ದೇವೆ. ಪ್ರಸ್ತಾವನೆ ಸಿದ್ಧಪಡಿಸಿ ಬಿಬಿಎಂಪಿ ಮುಖ್ಯ ಆಯುಕ್ತರ ಅನುಮೋದನೆಗೆ ಕಳುಹಿಸಿದ್ದೇವೆ. ಬಿಬಿಎಂಪಿ ಮುಖ್ಯ ಆಯುಕ್ತರಿಂದ ಒಪ್ಪಿಗೆ ದೊರೆತ ತಕ್ಷಣ ದಂತ ಚಿಕಿತ್ಸಾಲಯಗಳು ಮತ್ತು ಫಿಸಿಯೋಥೆರಪಿ ಸೌಲಭ್ಯಗಳನ್ನು ಆರಂಭಿಸುತ್ತೇವೆ. ಕರೆಯಲ್ಲಿ ವೈದ್ಯರನ್ನು ತೊಡಗಿಸಿಕೊಳ್ಳಲು ನಾವು ಆಲೋಚಿಸುತ್ತಿದ್ದೇವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಸುರಲ್ಕರ್ ವಿಕಾಸ್ ಕಿಶೋರ್ ಹೇಳಿದರು.


Click it and Unblock the Notifications