ಕೇಂದ್ರ ಸರ್ಕಾರ ಮಹಿಳೆಯರಿಗೆ ಸಿಹಿಸುದ್ದಿ ಕೊಟ್ಟಿದೆ. ಹೌದು, 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸುವುದಾಗಿ ಮೋದಿ ಸರ್ಕಾರ ಘೋಷಣೆ ಮಾಡಿದೆ. ಹಾಗಿದ್ರೆ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಲು ಇರುವಂತಹ ಅರ್ಹತೆಗಳೇನು..? ಅರ್ಜಿ ಸಲ್ಲಿಕೆ ಹೇಗೆ? ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ.
ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು,ದೇಶದ ಬಡ ಕುಟುಂಬದ ಮಹಿಳೆಯರಿಗೆ ಈ ಯೋಜನೆಯಿಂದ ಹೆಚ್ಚಿನ ಅನುಕೂಲವಾಗುತ್ತದೆ. ಕರ್ನಾಟಕ, ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಈ ಯೋಜನೆಯ ಮೂಲಕ ಹಿಂದುಳಿದ ಮಹಿಳೆಯರು ಸ್ವಾವಲಂಬಿ ಬದುಕಿದನ್ನು ಕಟ್ಟಿಕೊಂಡು ಆರ್ಥಿಕ ಸಬಲರಾಗಬಹುದು. ಈ ಯೋಜನೆಯಡಿ 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತದೆ. ಈಮೂಲಕ ಮಹಿಳೆಯರು ಟೈಲರಿಂಗ್ ಕೆಲಸದ ಮೂಲಕ ಮನೆಯಿಂದಲೇ ಹಣ ಗಳಿಸಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಭಾರತದ ಪೌರತ್ವ ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆ ಲಾಭ ಪಡೆಯಬಹುದು.
18 ರಿಂದ 45 ವರ್ಷ ವಯಸ್ಸಿನ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿದ್ದರೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆ ಬೇಕು?
ಆಧಾರ್ ಕಾರ್ಡ್, ಜನನ ಪ್ರಮಾಣಪತ್ರ, ವಾಸ ಸ್ಥಳ ದೃಢೀಕರಣ ಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆದಾಯ ಪ್ರಮಾಣಪತ್ರದಂತಹ ಕೆಲವು ಅಗತ್ಯ ದಾಖಲೆಗಳು ಬೇಕಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ನೀವು ಉಚಿತ ಹೊಲಿಗೆ ಮೆಷಿನ್ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ನೀವು ಮೊದಲಿಗೆ ಈ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ವೆಬ್‌ಸೈಟ್‌ನಲ್ಲಿ ಉಚಿತ ಹೊಲಿಗೆ ಮೆಷಿನ್ ಯೋಜನೆ 2024 ಅರ್ಜಿ ಡೌನ್‌ಲೋಡ್ ಮಾಡಿಕೊಳ್ಳಿ. ಬಳಿಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಮಹಿಳೆಯರು ಮಹಿಳಾ ಸಬಲೀಕರಣ ಕೇಂದ್ರ ಅಥವಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆ ಯಾವ ರಾಜ್ಯಗಳಲ್ಲಿ ಅನ್ವಯಿಸುತ್ತದೆ?
ಪ್ರಸ್ತುತ, ಈ ಯೋಜನೆಯನ್ನು ಆಯ್ದ ಕೆಲವು ರಾಜ್ಯಗಳಲ್ಲಿ ಪ್ರಾರಂಭಿಸಲಾಗಿದೆ. ಬಳಿಕ ದೇಶದಾದ್ಯಂತ ವಿಸ್ತರಣೆ ಮಾಡಲಾಗುವುದು.ಕರ್ನಾಟಕ, ರಾಜಸ್ಥಾನ,ಗುಜರಾತ್, ಮಹಾರಾಷ್ಟ್ರ,ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಈ ಯೋಜನೆಯು ಚಾಲ್ತಿಯಲ್ಲಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯು ಒಂದಾಗಿದೆ. ರಾಜ್ಯದ ಮಹಿಳೆಯರು ಈ ಯೋಜನೆಯ ಅನುಕೂಲವನ್ನು ಪಡೆಯಬಹುದು.


Click it and Unblock the Notifications