For Quick Alerts
ALLOW NOTIFICATIONS  
For Daily Alerts

ಆರ್ಥಿಕ ಹಿಂಜರಿತದಿಂದ ಹೊರಬಂದ ಭಾರತ: 3ನೇ ತ್ರೈಮಾಸಿಕದಲ್ಲಿ ಜಿಡಿಪಿ ಸಕಾರಾತ್ಮಕವಾಗಿದೆ

|

ಪ್ರಸಕ್ತ ಹಣಕಾಸು ವರ್ಷದ 3ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಸಕಾರಾತ್ಮಕವಾಗಿದೆ. ಮೊದಲೆರಡು ತ್ರೈಮಾಸಿಕದಲ್ಲಿ ಜಿಡಿಪಿಯಲ್ಲಿ ತೀವ್ರ ಕುಸಿತ ಕಂಡುಬಂದ ಬಳಿಕ ಜಿಡಿಪಿ ಸಕಾರಾತ್ಮಕವಾಗಿ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಸಾಂಖ್ಯಿಯ ಕಚೇರಿ ಶುಕ್ರವಾರ ಜಿಡಿಪಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್‌ನಿಂದ- ಡಿಸೆಂಬರ್ 2020 ರವರೆಗೆ) ಜಿಡಿಪಿ ಶೇಕಡಾ 0.4 ರಷ್ಟು ಏರಿಕೆಯಾಗಿದೆ. ಈ ಮೂಲಕ ಕೋವಿಡ್-19 ಬಳಿಕ ಮೊದಲ ಬಾರಿಗೆ ಜಿಡಿಪಿ ಸರಿ ಹಾದಿಗೆ ಮರಳಿದೆ.

ಆರ್ಥಿಕ ಹಿಂಜರಿತದಿಂದ ಹೊರಬಂದ ಭಾರತ: ಜಿಡಿಪಿ ಸಕಾರಾತ್ಮಕವಾಗಿದೆ!

 

ಇನ್ನು ಡಿಸೆಂಬರ್‌ಗೆ ಅಂತ್ಯವಾದ ತ್ರೈಮಾಸಿಕದಲ್ಲಿ ಸಕಾರಾತ್ಮಕ ಬೆಳವಣಿಗೆ ದಾಖಲಿಸಿದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಆದರೆ ಇತ್ತೀಚೆಗೆ ಮತ್ತೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು ಕಳವಳಕ್ಕೆ ಕಾರಣವಾಗಿದೆ.

ಈ ಅಂಕಿ ಅಂಶಗಳು 2020-21ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇಕಡಾ 8ರಷ್ಟು ಕುಸಿಯುತ್ತದೆ ಎಂದು ಗ್ರಹಿಸಲಾಗಿದೆ. ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಏಪ್ರಿಲ್ ನಿಂದ ಜನವರಿ ಅವಧಿಯಲ್ಲಿ ಹಣಕಾಸಿನ ಕೊರತೆ 12.34 ಲಕ್ಷ ಕೋಟಿ ರೂ. ನಷ್ಟಿದೆ.

ರಾಯಿಟರ್ಸ್ ನಡೆಸಿದ್ದ ಸಮೀಕ್ಷೆಯಲ್ಲಿ ಡಿಸೆಂಬರ್‌ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 0.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ವರದಿಯಾಗಿತ್ತು. ಇದೀಗ ಅದಕ್ಕೂ ಅಲ್ಪ ಕಡಿಮೆ ಅಂದರೆ ಶೇ.0.4ರಷ್ಟು ಬೆಳವಣಿಗೆ ದಾಖಲಾಗಿದೆ.

English summary

GDP Growth At 0.4%: India Exits Technical Recession

The Indian economy has exited recession after two consecutive quarters of de-growth as the gross domestic product (GDP) growth expanded by 0.4 per cent in the three months ended December 2020
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X