ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು 'ಅತಿ ಜಾಣ' ಎಂದು ಕರೆದಿದ್ದಾರೆ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಕುಸಿದಿದೆ. ಅದರ ಅನುಕೂಲವನ್ನು ಗ್ರಾಹಕರಿಗೆ ವರ್ಗಾಯಿಸಿ ಎಂದು ನಾವು ಕೇಳಿದರೆ, ನಮ್ಮ 'ಅತಿ ಜಾಣ' ಪ್ರಧಾನಿಗಳು ತೈಲದ ಮೇಲಿನ ಸುಂಕವನ್ನು ಹೆಚ್ಚಿಸಿದ್ದಾರೆ ಎಂದು ಭಾನುವಾರ ವ್ಯಂಗ್ಯವಾಡಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಅಬಕಾರಿ ಸುಂಕವನ್ನು ತಲಾ 3 ರುಪಾಯಿ ಏರಿಸುವ ಮೂಲಕ 39 ಸಾವಿರ ಕೋಟಿ ರುಪಾಯಿ ಆದಾಯ ಹೆಚ್ಚಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಘೋಷಣೆ ಮಾಡಿದ ಮರುದಿನವೇ ರಾಹುಲ್ ಗಾಂಧಿ ಈ ರೀತಿ ಗೇಲಿ ಮಾಡುತ್ತಾ ಟ್ವೀಟ್ ಮಾಡಿದ್ದಾರೆ.
ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಆಗಿದೆಯಲ್ಲಾ, ಅದರ ಅನುಕೂಲ ಜನರಿಗೆ ವರ್ಗಾಯಿಸುತ್ತೀರಾ ಎಂಬ ಪ್ರಶ್ನೆಗೆ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸದೆ ಎದ್ದುಹೋದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿಡಿಯೋ ಕೂಡ ರಾಹುಲ್ ಗಾಂಧಿ ಟ್ಯಾಗ್ ಮಾಡಿದ್ದಾರೆ.

ಭಾರತದ ಪ್ರಧಾನಿಗಳೇ, ಚುನಾಯಿತ ಸರ್ಕಾರವನ್ನು (ಮಧ್ಯಪ್ರದೇಶದ ಕಾಂಗ್ರೆಸ್ ನೇತೃತ್ವದ ಸರ್ಕಾರ) ಅಸ್ಥಿರಗೊಳಿಸುವುದರಲ್ಲಿ ಬಿಡುವಿಲ್ಲದಂತೆ ತೊಡಗಿಕೊಂಡಿರುವ ನಿಮಗೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ 35 ಪರ್ಸೆಂಟ್ ಕುಸಿದಿರುವುದು ಗಮನಕ್ಕೆ ಬಾರದಿರಬಹುದು ಎಂದು ಕಳೆದ ಬುಧವಾರವಷ್ಟೇ ರಾಹುಲ್ ಗಾಂಧಿ ಕಾಲೆಳೆದಿದ್ದರು.
ಪೆಟ್ರೋಲ್ ದರವನ್ನು ಲೀಟರ್ ಗೆ 60 ರುಪಾಯಿಗಿಂತ ಕೆಳಗೆ ಇಳಿಸುತ್ತೀರಾ? ಆ ಮೂಲಕ ಅನುಕೂಲವನ್ನು ಜನರಿಗೆ ವರ್ಗಾಯಿಸುತ್ತೀರಾ? ಇದರಿಂದ ಆರ್ಥಿಕತೆಗೂ ಚೈತನ್ಯ ಸಿಕ್ಕಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದರು ರಾಹುಲ್.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications