ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಎಲ್ಲರೂ ಹುಬ್ಬೇರಿಸುವಂತಹ ಸಲಹೆಯೊಂದನ್ನು ನೀಡಿದ್ದಾರೆ. ಅದೇನಂದರೆ ಡಾಲರ್ ಎದುರು ರುಪಾಯಿ ಮೌಲ್ಯ ಹೆಚ್ಚಿಸಲು ನೋಟಿನ ಮೇಲೆ ಲಕ್ಷ್ಮೀ ಚಿತ್ರ ಮುದ್ರಿಸಿದರೆ ಉತ್ತಮ ಎಂದಿದ್ದಾರೆ.
ಮಧ್ಯಪ್ರದೇಶದ ಕಂದ್ವಾದಲ್ಲಿ ನಡೆದ ವಿವೇಕಾನಂದ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಸುಬ್ರಹ್ಮಣಿಯನ್ ಸ್ವಾಮಿ ಭಾರತೀಯ ನೋಟುಗಳ ಮೇಲೆ ಐಶ್ವರ್ಯ ದೇವತೆಯಾದ ಲಕ್ಷ್ಮೀ ಚಿತ್ರ ಮುದ್ರಿಸಿದರೆ ರುಪಾಯಿ ಮೌಲ್ಯ ಹೆಚ್ಚಬಹುದು ಎಂದು ಸಲಹೆ ನೀಡಿದ್ದಾರೆ.

ಸುಬ್ರಹ್ಮಣಿಯನ್ ಸ್ವಾಮಿ ಈ ಸಲಹೆ ನೀಡಲು ಕಾರಣ, ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ಇಂಡೋನೇಶಿಯಾದ ಕರೆನ್ಸಿ ಮೇಲೆ ಗಣೇಶನ ಚಿತ್ರ ಮುದ್ರಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಈ ಮೇಲಿನ ರೀತಿಯಲ್ಲಿ ಉತ್ತರ ನೀಡಿದ್ದಾರೆ. ವಿಘ್ನ ವಿನಾಶಕ ಗಣೇಶನ ಚಿತ್ರ ಮುದ್ರಿಸಲು ನನ್ನ ಅಭ್ಯಂತರವಿಲ್ಲ. ಆದರೆ ಲಕ್ಷ್ಮೀ ಚಿತ್ರ ಮುದ್ರಿಸಿದರೆ ರುಪಾಯಿ ಮೌಲ್ಯ ಹೆಚ್ಚಾಗಬಹುದು ಎಂದು ನನ್ನ ಅಭಿಪ್ರಾಯ ಎಂದಿದ್ದಾರೆ.
ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರೇ ಇದಕ್ಕೆ ಉತ್ತರಿಸಬೇಕು. ದೇವ ಗಣೇಶ ವಿಘ್ನಗಳನ್ನು ನಿವಾರಿಸುತ್ತಾನೆ. ಭಾರತೀಯ ನೋಟುಗಳ ಮೇಲೆ ಲಕ್ಷ್ಮೀ ದೇವಿಯ ಚಿತ್ರವನ್ನು ಮುದ್ರಿಸಿದರೆ ಇನ್ನೂ ಚೆನ್ನಾಗಿರುತ್ತದೆ. ಹಣಕಾಸು ಸ್ಥಿತಿಯೂ ಸುಧಾರಣೆಯಾಗುತ್ತದೆ. ಹಾಗೊಮ್ಮೆ ನಿರ್ಧಾರ ಮಾಡಿದರೆ ನನ್ನ ಸಹಮತವಂತೂ ಖಂಡಿತ ಇದೆ ಎಂದು ಹೇಳಿದರು. ಅಲ್ಲದೆ ತಮ್ಮ ಮಾತುಗಳ ಬಗ್ಗೆ ಯಾರೂ ತಪ್ಪು ತಿಳಿದುಕೊಳ್ಳಬೇಡಿ, ಕೆಟ್ಟದಾಗಿ ಭಾವಿಸಬೇಡಿ ಎಂದೂ ತಿಳಿಸಿದರು.
ಸುಬ್ರಹ್ಮಣಿಯನ್ ಸ್ವಾಮಿ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಬೆಂಬಲ ವ್ಯಕ್ತವಾಗುತ್ತಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications