ಸತತ ಮೂರನೇ ದಿನ ಭಾರತದಲ್ಲಿ ಚಿನ್ನದ ಬೆಲೆಯು ಇಳಿಕೆಯಾಗಿದೆ. ಅಕ್ಷಯ ತೃತೀಯ ದಿನದಂದು ಆರಂಭವಾದ ಚಿನ್ನದ ಬೆಲೆ ಇಳಿಕೆಯೂ ಇಂದು ಕೂಡಾ ಮುಂದುವರಿದಿದೆ. ಹತ್ತು ಗ್ರಾಂ ಚಿನ್ನದ ದರವು ಸೋಮವಾರ 55,720 ರೂಪಾಯಿಯಿಂದ 55,650 ರೂಪಾಯಿಗೆ ಇಳಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,790 ರೂಪಾಯಿಯಿಂದ 60,710ಕ್ಕೆ ಇಳಿಕೆಯಾಗಿದೆ.
ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಭಾರೀ ಪ್ರಮಾಣದಲ್ಲಿ ಅಧಿಕವಾಗಿದೆ. ಚಿನ್ನವಂತು ಸಾರ್ವಕಾಲಿಕ ಏರಿಕೆಯನ್ನು ಕಂಡಿದೆ. ಏರಿಕೆಯಾಗುವ ಸಂದರ್ಭದಲ್ಲಿ ಅತೀ ಹೆಚ್ಚು ದರ ಏರಿದ್ದರೂ ಕೂಡಾ ಇಳಿಕೆ ವೇಳೆ ಅತೀ ಕಡಿಮೆ ದರ ಇಳಿಯುತ್ತಿದೆ. ಹಳದಿ ಲೋಹದ ದರವು ಚೆನ್ನೈನಲ್ಲಿ ಅತೀ ದುಬಾರಿಯಾಗಿದೆ. ಚೆನ್ನೈನಲ್ಲಿ 22 ಗ್ರಾಂ ಚಿನ್ನದ ಬೆಲೆಯು 56,150 ರೂಪಾಯಿ ಆಗಿದೆ. ಇನ್ನು ತಮಿಳುನಾಡಿನ ರಾಜಧಾನಿಯಲ್ಲಿ 24 ಕ್ಯಾರೆಟ್ ಚಿನ್ನದ ದರ 61,250 ರೂಪಾಯಿ ಆಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
ಏಪ್ರಿಲ್ 21ರಂದು ಏರಿಕೆಯಾಗಿದ್ದ ಚಿನ್ನದ ದರವು ಸತತ 3 ದಿನಗಳಿಂದ ಕೊಂಚ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಕಳೆದ ಐದು ದಿನದಲ್ಲಿ 1 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 4 ಬಾರಿ ಇಳಿದಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 7 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗುತ್ತಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ.
ಏಪ್ರಿಲ್ 24ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 70 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 55,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 80 ರೂಪಾಯಿ ಕುಗ್ಗಿದ್ದು ಪ್ರಸ್ತುತ 60,710 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂಪಾಯಿ ಕುಗ್ಗಿದ್ದು ಪ್ರಸ್ತುತ 76,400 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜನವರಿ 24ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು 59859.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗಿದ್ದು 74439.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.18ರಷ್ಟು ಕುಗ್ಗಿದ್ದು 1,981.09 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.73ರಷ್ಟು ಇಳಿಕೆಯಾಗಿದ್ದು 24.94 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-50 ರೂಪಾಯಿ)
24 ಕ್ಯಾರೆಟ್ ಚಿನ್ನ: 60,760 ರೂಪಾಯಿ (-80 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (-70 ರೂಪಾಯಿ)
24 ಕ್ಯಾರೆಟ್ ಚಿನ್ನ: 60,710 ರೂಪಾಯಿ (-80 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,860 ರೂಪಾಯಿ (-80 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (-70 ರೂಪಾಯಿ)
24 ಕ್ಯಾರೆಟ್ ಚಿನ್ನ: 60,710 ರೂಪಾಯಿ (-80 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-50 ರೂಪಾಯಿ)
24 ಕ್ಯಾರೆಟ್ ಚಿನ್ನ: 60,760 ರೂಪಾಯಿ (-80 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-50 ರೂಪಾಯಿ)
24 ಕ್ಯಾರೆಟ್ ಚಿನ್ನ: 60,760 ರೂಪಾಯಿ (-80 ರೂಪಾಯಿ)


Click it and Unblock the Notifications