ಮೂರು ದಿನಗಳ ಕಾಲ ಕೊಂಚ ಇಳಿಕೆ ಕಂಡಿದ್ದ ಬಂಗಾರ ದರವು ಮಂಗಳವಾರ ಮತ್ತೆ ಏರಿಕೆಯಾಗಿದೆ. ಅಕ್ಷಯ ತೃತೀಯ ದಿನದಂದು ಆರಂಭವಾದ ಚಿನ್ನದ ಬೆಲೆ ಇಳಿಕೆಯೂ ಸೋಮವಾರದವರೆಗೂ ಅಂದರೆ ಸತತ ಮೂರು ದಿನಗಳ ಕಾಲ ಕುಸಿತ ಕಂಡಿತ್ತು. ಆದರೆ ಏಪ್ರಿಲ್ 25ರಂದು ಕೊಂಚ ಹೆಚ್ಚಳವಾಗಿದೆ. ಹತ್ತು ಗ್ರಾಂ ಚಿನ್ನದ ದರವು ಮಂಗಳವಾರ 55,650 ರೂಪಾಯಿಯಿಂದ 55,850 ರೂಪಾಯಿಗೆ ಏರಿಕೆಯಾಗಿದೆ.
ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,710 ರೂಪಾಯಿಯಿಂದ 60,930ಕ್ಕೆ ಹೆಚ್ಚಳವಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಭಾರೀ ಪ್ರಮಾಣದಲ್ಲಿ ಅಧಿಕವಾಗಿದೆ. ಚಿನ್ನವಂತು ಸಾರ್ವಕಾಲಿಕ ಏರಿಕೆಯನ್ನು ಕಂಡಿದೆ. ಏರಿಕೆಯಾಗುವ ಸಂದರ್ಭದಲ್ಲಿ ಅತೀ ಹೆಚ್ಚು ದರ ಏರಿದ್ದರೂ ಕೂಡಾ ಇಳಿಕೆ ವೇಳೆ ಅತೀ ಕಡಿಮೆ ದರ ಇಳಿಯುತ್ತಿದೆ.

ಅಬಕಾರಿ ಸುಂಕ, ಉತ್ಪಾದನಾ ವೆಚ್ಚಗಳು ಮತ್ತು ರಾಜ್ಯ ತೆರಿಗೆಗಳಂತಹ ನಿರ್ದಿಷ್ಟ ಅಂಶಗಳ ಆಧಾರದ ಮೇಲೆ, ರಾಷ್ಟ್ರದ ವಿವಿಧ ಪ್ರದೇಶಗಳಿಗೆ ಚಿನ್ನದ ಬೆಲೆ ಬೇರೆ ಬೇರೆ ರೀತಿಯಾಗಿರುತ್ತದೆ. ಮಂಗಳೂರಿನಲ್ಲಿರುವ ಚಿನ್ನದ ದರಕ್ಕೂ ಚೆನ್ನೈನಲ್ಲಿರುವ ಚಿನ್ನದ ದರಕ್ಕೂ ವ್ಯತ್ಯಾಸ ಇರುತ್ತದೆ. ಬೆಳ್ಳಿ ದರವು ಕೂಡಾ ಈ ರೀತಿಯೇ ಆಗಿದೆ. ಪ್ರದೇಶಕ್ಕೆ ಅನುಗುಣವಾಗಿ ಅಲ್ಲಿನ ತೆರಿಗೆಗಳ ಆಧಾರದಲ್ಲಿ ಚಿನ್ನದ ಬೆಲೆಯು ನಿರ್ಧಾರವಾಗುತ್ತದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಬಗ್ಗೆ ಈ ಕೆಳಗೆ ಮಾಹಿತಿ ನೀಡಲಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
ಚಿನ್ನದ ದರವು ಸತತ 3 ದಿನಗಳಿಂದ ಕೊಂಚ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಮಂಗಳವಾರ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 3 ಬಾರಿ ಇಳಿದಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 6 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಏರಿಕೆಯಾಗಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ.
ಏಪ್ರಿಲ್ 25ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 55,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಹಿಗ್ಗಿದ್ದು ಪ್ರಸ್ತುತ 60,930 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 300 ರೂಪಾಯಿ ಹಿಗ್ಗಿದ್ದು ಪ್ರಸ್ತುತ 76,700 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜನವರಿ 25ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು 59964.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗಿದ್ದು
74564.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.35ರಷ್ಟು ಕುಗ್ಗಿದ್ದು 1,988.42 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.75ರಷ್ಟು ಇಳಿಕೆಯಾಗಿದ್ದು 25.01 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+220 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (+220 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 61,080 ರೂಪಾಯಿ (+220 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (+220 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+220 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+220 ರೂಪಾಯಿ)


Click it and Unblock the Notifications