ಎರಡು ದಿನಗಳ ಏರಿಕೆ ಬಳಿಕ ನಿನ್ನೆ ಸ್ಥಿರವಾಗಿದ್ದ ಚಿನ್ನದ ದರವು ಶುಕ್ರವಾರ ಏರಿಕೆಯಾಗಿದೆ. ಅಕ್ಷಯ ತೃತೀಯ ದಿನದಿಂದ ಆರಂಭವಾಗಿ ಮೂರು ದಿನಗಳ ಕಾಲ ಇಳಿಕೆಯಾಗಿದ್ದ ದರವು ಮಂಗಳವಾರ ಹಾಗೂ ಬುಧವಾರ ಕೊಂಚ ಏರಿಕೆ ಕಂಡಿದೆ. ಆದರೆ ಶ್ರುಕ್ರವಾರ ಹೆಚ್ಚಳವಾಗಿದೆ. ಏಪ್ರಿಲ್ 28ರಂದು ಹತ್ತು ಗ್ರಾಂ ಚಿನ್ನದ ದರವು 55,950 ರೂಪಾಯಿಯಿಂದ 55,750 ರೂಪಾಯಿಗೆ ಇಳಿಕೆಯಾಗಿದೆ.
ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 61,040ಯಿಂದ 60,820 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಅಕ್ಷಯ ತೃತೀಯಕ್ಕೂ ಮುನ್ನ ಹೆಚ್ಚಳವಾಗಿದ್ದ ದರವು ಅಕ್ಷಯ ತೃತೀಯ ದಿನದಿಂದ ಕೊಂಚ ಕುಗ್ಗಿದೆ. ಆದರೆ ಚಿನ್ನ ಈಗಲೂ ದುಬಾರಿಯಾಗಿದೆ. ಕೆಲವೊಂದು ನಗರದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕವಾಗಿ ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
ಸತತ ಎರಡು ದಿನಗಳ ಏರಿಕೆ ಬಳಿಕ ನಿನ್ನೆ ಸ್ಥಿರವಾಗಿದ್ದ ಚಿನ್ನದ ದರವು ಶುಕ್ರವಾರ ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 2 ಬಾರಿ ಇಳಿದಿದೆ. 1 ಬಾರಿ ಸ್ಥಿರತೆ ಕಾಯ್ದುಕೊಂಡಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ.
ಏಪ್ರಿಲ್ 28ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 55,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಕುಗ್ಗಿದ್ದು ಪ್ರಸ್ತುತ 60,820 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 300 ರೂಪಾಯಿ ಕುಗ್ಗಿದ್ದು ಪ್ರಸ್ತುತ 76,200 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜನವರಿ 28ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59754.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 73981.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.21ರಷ್ಟು ಕುಗ್ಗಿದ್ದು 1,982.94 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.01ರಷ್ಟು ಏರಿಕೆಯಾಗಿದ್ದು 24.91 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,800 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,870 ರೂಪಾಯಿ (-230 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,820 ರೂಪಾಯಿ (-220 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,970 ರೂಪಾಯಿ (-220 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,820 ರೂಪಾಯಿ (-220 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,800 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,870 ರೂಪಾಯಿ (-230 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,820 ರೂಪಾಯಿ (-220 ರೂಪಾಯಿ)


Click it and Unblock the Notifications