ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಸ್ಥಿರವಾಗಿರುತ್ತಿದೆ. ಮತ್ತೊಂದು ದಿನ ಇಳಿಕೆ ಕಾಣುತ್ತಿದೆ. ಕಳೆದ ಮೂರು ದಿನದಿಂದ ಈ ರೀತಿ ದರ ಏರಿಳಿತ ಕಾಣುತ್ತಿದೆ. ಏಪ್ರಿಲ್ 29ರಂದು ಹತ್ತು ಗ್ರಾಂ ಚಿನ್ನದ ದರವು 55,750 ರೂಪಾಯಿಯಿಂದ 55,850 ರೂಪಾಯಿಗೆ ಏರಿಕೆಯಾಗಿದೆ.
ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,820ಯಿಂದ 60,930 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಕಳೆದ ಮೂರು ದಿನಗಳಲ್ಲಿ ಏರಿಕೆ ಇಳಿಕೆ ನಿರಂತರವಾಗಿದೆ. ಆದರೆ ಚಿನ್ನ ಈಗಲೂ ದುಬಾರಿಯಾಗಿದೆ. ಕೆಲವೊಂದು ನಗರದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕವಾಗಿ ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 1 ಬಾರಿ ಇಳಿದಿದೆ. 1 ಬಾರಿ ಸ್ಥಿರತೆ ಕಾಯ್ದುಕೊಂಡಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ.
ಏಪ್ರಿಲ್ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 55,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಹಿಗ್ಗಿದ್ದು ಪ್ರಸ್ತುತ 60,930 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 76,200 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜನವರಿ 28ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59945.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 74155.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.13ರಷ್ಟು ಹಿಗ್ಗಿದ್ದು 1,989.78 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.56ರಷ್ಟು ಏರಿಕೆಯಾಗಿದ್ದು 25.05 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+110 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (+110 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 56,000 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 61,080 ರೂಪಾಯಿ (+110 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (+110 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+110 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+110 ರೂಪಾಯಿ)


Click it and Unblock the Notifications