ಚಿನ್ನ ಹಾಗೂ ಬೆಳ್ಳಿ ದರವು ಕಳೆದ ಕೆಲವು ದಿನಗಳಿಂದ ಏರಿಳಿತವನ್ನು ಕಾಣುತ್ತಿದೆ. ಮೇ 28, 29ರಂದು ಸ್ಥಿರವಾಗಿದ್ದ ದರ ಅದಾದ ಬಳಿಕ ಇಳಿಕೆ, ಏರಿಕೆ ಮತ್ತೆ ಇಳಿಕೆಯಾಗುತ್ತಾ ಸಾಗಿದೆ. ಬೆಳ್ಳಿ ದರವು ಕೂಡಾ ಇದೇ ರೀತಿ ಏರಿಳಿತ ಕಂಡಿದೆ. ಆದರೆ ನಾವು ಕಳೆದ ಹತ್ತು ದಿನಗಳ ದರವನ್ನು ಪರಿಶೀಲನೆ ಮಾಡಿದಾಗ ಬಂಗಾರ ಬೆಲೆಯು ಏರಿಕೆಗಿಂತ ಅಧಿಕ ಇಳಿಕೆಯಾಗಿರುವುದು ಕಂಡು ಬರುತ್ತದೆ.
ಜೂನ್ 1ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,850 ರೂಪಾಯಿಯಿಂದ 55,700 ರೂಪಾಯಿಗೆ ಇಳಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,930 ರೂಪಾಯಿಯಿಂದ 60,760 ರೂಪಾಯಿಗೆ ಕುಗ್ಗಿದೆ. ಬೆಳ್ಳಿ ದರ ಇಂದು ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. ಒಂದು ಬಾರಿ ಬಂಗಾರ ದರವು ಏರಿಕೆಯಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 6 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 6 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಜೂನ್ 1ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 150 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 55,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 170 ರೂಪಾಯಿ ಕುಗ್ಗಿದ್ದು ಪ್ರಸ್ತುತ 60,760 ರೂಪಾಯಿ ಆಗಿದೆ. ಇಂದು ಬೆಳ್ಳಿ ದರವೂ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 4000 ರೂಪಾಯಿ ಕುಗ್ಗಿದ್ದು ಪ್ರಸ್ತುತ 72,800 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 1ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59879.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 71360.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.57ರಷ್ಟು ಇಳಿಕೆಯಾಗಿದ್ದು 1,955.41 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.97ರಷ್ಟು ಕುಗ್ಗಿದ್ದು 23.33 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,810 ರೂಪಾಯಿ (-170 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-150 ರೂಪಾಯಿ)
24 ಕ್ಯಾರೆಟ್ ಚಿನ್ನ: 60,760 ರೂಪಾಯಿ (-170 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (-150 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (-150 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-150 ರೂಪಾಯಿ)
24 ಕ್ಯಾರೆಟ್ ಚಿನ್ನ: 60,940 ರೂಪಾಯಿ (+10 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,810 ರೂಪಾಯಿ (-170 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,810 ರೂಪಾಯಿ (-170 ರೂಪಾಯಿ)


Click it and Unblock the Notifications