ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಕಳೆದ ಹಲವಾರು ದಿನಗಳಿಂದ ಏರಿಕೆ, ಇಳಿಕೆ, ಸ್ಥಿರತೆಯನ್ನು ಬಂಗಾರ ದರ ಕಾಣುತ್ತಿದೆ. ಒಂದು ದಿನ ಏರಿಕೆಯಾದರೆ ಮರುದಿನ ಸ್ಥಿರವಾಗಿರುವುದು ಅಥವಾ ಇಳಿಕೆಯಾಗುವುದನ್ನು ನಾವು ಕಾಣಬಹುದಾಗಿದೆ. ಜೂನ್ 4,ರಂದು ಗೋಲ್ಡ್ ರೇಟ್ ಸ್ಥಿರವಾಗಿದ್ದು ಅದಾದ ಬಳಿಕ ಏರಿಕೆ, ಸ್ಥಿರತೆ, ಇಳಿಕೆ, ಏರಿಕೆ, ಇಳಿಕೆಯನ್ನು ಕಂಡಿದೆ.
ಬೆಳ್ಳಿ ದರವು ಕೂಡಾ ಇದೇ ರೀತಿಯಾಗಿ ಸಾಗುತ್ತಿದೆ. ಆದರೆ ಇಂದು ಬೆಳ್ಳಿ ದರವು ಸ್ಥಿರವಾಗಿದೆ. ಜೂನ್ 10ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,600 ರೂಪಾಯಿಯಿಂದ 55,500 ರೂಪಾಯಿಗೆ ಇಳಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,650 ರೂಪಾಯಿಯಿಂದ 60,550 ರೂಪಾಯಿಗೆ ಇಳಿಕೆ ಕಂಡಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಏರಿಕೆಯಾಗಿದೆ. 1 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 4 ಬಾರಿ ಸ್ಥಿರವಾಗಿದೆ.
ಜೂನ್ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 55,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಕುಸಿತ ಕಂಡಿದ್ದು ಪ್ರಸ್ತುತ 60,550 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 74,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 9ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59840.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 73825.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.24ರಷ್ಟು ಇಳಿಕೆಯಾಗಿದ್ದು 1,960.75 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.04ರಷ್ಟು ಹಿಗ್ಗಿದ್ದು 24.28 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (-130 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,500 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,550 ರೂಪಾಯಿ (-100 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,700 ರೂಪಾಯಿ (-130 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,500 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,550 ರೂಪಾಯಿ (-130 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (-130 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (-130 ರೂಪಾಯಿ)


Click it and Unblock the Notifications