ಕಳೆದ ಹಲವಾರು ದಿನಗಳಿಂದ ಚಿನ್ನದ ಬೆಲೆ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಬಂಗಾರ ದರವು ಒಂದು ದಿನ ಏರಿಕೆಯಾದರೆ, ಮತ್ತೊಂದು ದಿನ ಇಳಿಕೆಯಾಗುತ್ತಿದೆ. ಮತ್ತೆ ಸ್ಥಿರತೆ ಕಾಯ್ದುಕೊಳ್ಳುತ್ತಿದೆ. ಬೆಳ್ಳಿ ದರವು ಕೂಡಾ ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಿನ್ನೆ ಇಳಿಕೆಯಾಗಿದ್ದ ಗೋಲ್ಡ್ ರೇಟ್ ಇಂದು (ಜೂನ್ 13) ಸ್ಥಿರತೆ ಕಾಯ್ದುಕೊಂಡಿದೆ.
ಬೆಳ್ಳಿ ದರ ಮಾತ್ರ ಸತತ ಎರಡು ದಿನದಿಂದ ಕುಸಿಯುತ್ತಿದೆ. ಜೂನ್ 13ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,400 ರೂಪಾಯಿ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,450 ರೂಪಾಯಿ ಆಗಿದೆ. ಬೆಳ್ಳಿ ದರ ಮಾತ್ರ ಇಂದು ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಸ್ಥಿರವಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 1 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 5 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 5 ಬಾರಿ ಸ್ಥಿರವಾಗಿದೆ.
ಜೂನ್ 13ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ ಸ್ಥಿರವಾಗಿದ್ದು ಪ್ರಸ್ತುತ 55,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಯಥಾಸ್ಥಿತಿಯನ್ನು ಕಾಯ್ದುಕೊಂಡಿದ್ದು ಪ್ರಸ್ತುತ 60,450 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 74,100 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 13ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59770.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 73416.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.19ರಷ್ಟು ಏರಿಕೆಯಾಗಿದ್ದು 1,963.73 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.36ರಷ್ಟು ಹಿಗ್ಗಿದ್ದು 24.18 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,450 ರೂಪಾಯಿ (----------)
24 ಕ್ಯಾರೆಟ್ ಚಿನ್ನ: 60,500 ರೂಪಾಯಿ (----------)
ಮುಂಬೈ
22 ಕ್ಯಾರೆಟ್ ಚಿನ್ನ: 55,400 ರೂಪಾಯಿ (----------)
24 ಕ್ಯಾರೆಟ್ ಚಿನ್ನ: 60450 ರೂಪಾಯಿ (----------)
ದೆಹಲಿ
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (----------)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (----------)
ಕೇರಳ
22 ಕ್ಯಾರೆಟ್ ಚಿನ್ನ: 55,400 ರೂಪಾಯಿ (----------)
24 ಕ್ಯಾರೆಟ್ ಚಿನ್ನ: 60,450 ರೂಪಾಯಿ (----------)
ಮಂಗಳೂರು
22 ಕ್ಯಾರೆಟ್ ಚಿನ್ನ: 55,450 ರೂಪಾಯಿ (----------)
24 ಕ್ಯಾರೆಟ್ ಚಿನ್ನ: 60,500 ರೂಪಾಯಿ (----------)
ಮೈಸೂರು
22 ಕ್ಯಾರೆಟ್ ಚಿನ್ನ: 55,450 ರೂಪಾಯಿ (----------)
24 ಕ್ಯಾರೆಟ್ ಚಿನ್ನ: 60,500 ರೂಪಾಯಿ (----------)


Click it and Unblock the Notifications