ಕಳೆದ ಹಲವಾರು ದಿನಗಳಿಂದ ಇಳಿಕೆ ಹಾಗೂ ಸ್ಥಿರತೆಯನ್ನು ಕಾಯ್ದುಕೊಂಡು ಬಂದಿದ್ದ ಗೋಲ್ಡ್ ರೇಟ್ ಇಂದು ಏರಿಕೆಯನ್ನು ಕಂಡಿದೆ. ಈ ಹಿಂದೆ ಜೂನ್ 9ರಂದು ಬಂಗಾರ ದರವು ಏರಿಕೆ ಕಂಡಿದ್ದು, ಅದಾದ ಬಳಿಕ ಜೂನ್ 16ರಂದೇ ಚಿನ್ನದ ದರವು ಹೆಚ್ಚಳವಾಗಿದೆ. ಇದಕ್ಕೂ ಮುನ್ನ ಕಳೆದ ಎರಡು ದಿನಗಳಿಂದ ಗೋಲ್ಡ್ ರೇಟ್ ಇಳಿಕೆಯಾಗಿದೆ. ಬಂಗಾರ ದರ ಮಾತ್ರ ಹಲವಾರು ದಿನಗಳಿಂದ ಏರಿಕೆಯನ್ನು ಕಂಡಿಲ್ಲ.
ಬೆಳ್ಳಿ ದರ ಮಾತ್ರ ಸತತ 4 ದಿನ ಕುಸಿತ ಕಂಡಿದ್ದು ಇಂದು ಸ್ಥಿರವಾಗಿದೆ. ಜೂನ್ 16ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 54,700 ರೂಪಾಯಿಯಿಂದ 55,100 ರೂಪಾಯಿಗೆ ಏರಿಕೆ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 59,670 ರೂಪಾಯಿಯಿಂದ 60,110 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರ ಮಾತ್ರ ಇಂದು ಸ್ಥಿರವಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಸತತ ಎರಡು ದಿನಗಳಿಂದ ಇಳಿಕೆಯಾಗಿದ್ದ ಬಂಗಾರ ದರವು ಇಂದು ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 1 ಬಾರಿ ಸ್ಥಿರವಾಗಿದೆ. 1 ಬಾರಿ ಮಾತ್ರ ಏರಿಕೆಯಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 1 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 4 ಬಾರಿ ಸ್ಥಿರವಾಗಿದೆ.
ಜೂನ್ 16ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 400 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 55,100 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಹೆಚ್ಚಳ ಕಂಡಿದ್ದು ಪ್ರಸ್ತುತ 60,110 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 73,100 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 16ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59276.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 72545.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.30ರಷ್ಟು ಏರಿಕೆಯಾಗಿದ್ದು 1,964.2 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.65ರಷ್ಟು ಹಿಗ್ಗಿದ್ದು 24.03 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,150 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,160 ರೂಪಾಯಿ (+440 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (+440 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,250 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,260 ರೂಪಾಯಿ (+440 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (+440 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,150 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,160 ರೂಪಾಯಿ (+440 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,150 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,160 ರೂಪಾಯಿ (+440 ರೂಪಾಯಿ)


Click it and Unblock the Notifications