ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಾ ಬಂದಿದೆ. ಎರಡು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡಿದ್ದ ಬಂಗಾರ ದರವು ಜೂನ್ 19ರಂದು ಕೊಂಚ ಇಳಿಕೆಯಾಗಿದೆ. ಆದರೆ ಈ ಇಳಿಕೆಯು ಬೆಲೆಯಲ್ಲಿ ಹೆಚ್ಚಿನ ಪ್ರಭಾವ ಉಂಟು ಮಾಡದು. ಇನ್ನು ಈ ಹಿಂದೆ ಜೂನ್ 15ರಂದು ಗೋಲ್ಡ್ ರೇಟ್ ಇಳಿಕೆಯಾಗಿದೆ, ಅದಾದ ಬಳಿಕ ಇಂದು ಕೊಂಚ ಇಳಿದಿದೆ. ಆದರೆ ಬಂಗಾರ ಬೆಲೆ ಹಲವಾರು ದಿನಗಳಿಂದ ಹೆಚ್ಚಳವಾಗಿಲ್ಲ.
ಜೂನ್ 19ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,100 ರೂಪಾಯಿಯಿಂದ 55,070 ರೂಪಾಯಿಗೆ ಇಳಿಕೆ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,110 ರೂಪಾಯಿಯಿಂದ 60,070 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಎರಡು ದಿನಗಳಿಂದ ಸ್ಥಿರವಾಗಿಯೇ ಇದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಸತತ ಎರಡು ದಿನಗಳಿಂದ ಸ್ಥಿರವಾಗಿದ್ದ ಬಂಗಾರ ದರವು ಇಂದು ಕೊಂಚ ಇಳಿಕೆಯಾಗಿದೆ. ಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. 1 ಬಾರಿ ಮಾತ್ರ ಏರಿಕೆಯಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 1 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 5 ಬಾರಿ ಸ್ಥಿರವಾಗಿದೆ.
ಜೂನ್ 19ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 30 ರೂಪಾಯಿ ಇಳಿಕೆಯಾಗಿದ್ದು 55,070 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 40 ರೂಪಾಯಿ ಕುಸಿತವನ್ನು ಕಂಡಿದ್ದು, ಪ್ರಸ್ತುತ 60,070 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ದು ಕೆಜಿ ಬೆಳ್ಳಿ ದರವು ಪ್ರಸ್ತುತ 73,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 19ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59308.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 72790.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.06ರಷ್ಟು ಇಳಿಕೆಯಾಗಿದ್ದು 1,955.9 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.04ರಷ್ಟು ಕುಗ್ಗಿದ್ದು 24.1 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,120 ರೂಪಾಯಿ (-30 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-50 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,070 ರೂಪಾಯಿ (-30 ರೂಪಾಯಿ)
24 ಕ್ಯಾರೆಟ್ ಚಿನ್ನ: 60,070 ರೂಪಾಯಿ (-40 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,350 ರೂಪಾಯಿ (+90 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-50 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,070 ರೂಪಾಯಿ (-30 ರೂಪಾಯಿ)
24 ಕ್ಯಾರೆಟ್ ಚಿನ್ನ: 60,070 ರೂಪಾಯಿ (-40 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,120 ರೂಪಾಯಿ (-30 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-50 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,120 ರೂಪಾಯಿ (-30 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-50 ರೂಪಾಯಿ)


Click it and Unblock the Notifications