ಚಿನ್ನ ಹಾಗೂ ಬೆಳ್ಳಿ ದರವು ಕಳೆದ ಕೆಲವು ದಿನಗಳಿಂದ ಏರಿಳಿತವನ್ನು ಕಾಣುತ್ತಿದೆ. ಒಂದು ದಿನ ಏರಿಕೆ ಮತ್ತೊಂದು ದಿನ ಇಳಿಕೆಯಾಗುತ್ತಿದೆ. ಮೇ 30ರಂದು ಇಳಿಕೆಯಾದ ಬಂಗಾರ ದರ ಅದರ ಮರುದಿನ ಏರಿಕೆಯಾಗಿದೆ, ಅದರ ನಂತರ ಮತ್ತೆ ಕುಗ್ಗಿದೆ. ಈಗ ಮತ್ತೆ ಹೆಚ್ಚಳವಾಗಿದೆ. ಹೀಗೆ ದಿನದಿಂದ ದಿನಕ್ಕೆ ಬದಲಾವಣೆಗಳು ಆಗುತ್ತಲೇ ಇದೆ.
ಕಳೆದ ನಾಲ್ಕು ದಿನಗಳಲ್ಲಿ ಇಳಿಕೆಗಿಂತ ಅಧಿಕ ಏರಿಕೆಯಾಗಿದೆ. ಜೂನ್ 2ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,700 ರೂಪಾಯಿಯಿಂದ 56,000 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,760 ರೂಪಾಯಿಯಿಂದ 61,100 ರೂಪಾಯಿಗೆ ಹಿಗ್ಗಿದೆ. ಬೆಳ್ಳಿ ದರ ಇಂದು ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಏರಿಕೆಯಾಗಿದೆ. ಒಂದು ಬಾರಿ ಬಂಗಾರ ದರವು ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಜೂನ್ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 300 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 56,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 340 ರೂಪಾಯಿ ಹಿಗ್ಗಿದ್ದು ಪ್ರಸ್ತುತ 61,100 ರೂಪಾಯಿ ಆಗಿದೆ. ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 600 ರೂಪಾಯಿ ಹಿಗ್ಗಿದ್ದು ಪ್ರಸ್ತುತ 73,400 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 2ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 60100.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 72666.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.05ರಷ್ಟು ಇಳಿಕೆಯಾಗಿದ್ದು 1,975.96 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.07ರಷ್ಟು ಹಿಗ್ಗಿದ್ದು 23.89 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 56,050 ರೂಪಾಯಿ (+300 ರೂಪಾಯಿ)
24 ಕ್ಯಾರೆಟ್ ಚಿನ್ನ: 61,150 ರೂಪಾಯಿ (+340 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 56,000 ರೂಪಾಯಿ (+300 ರೂಪಾಯಿ)
24 ಕ್ಯಾರೆಟ್ ಚಿನ್ನ: 61,100 ರೂಪಾಯಿ (+340 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 56,150 ರೂಪಾಯಿ (+300 ರೂಪಾಯಿ)
24 ಕ್ಯಾರೆಟ್ ಚಿನ್ನ: 61,250 ರೂಪಾಯಿ (+340 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 56,000 ರೂಪಾಯಿ (+300 ರೂಪಾಯಿ)
24 ಕ್ಯಾರೆಟ್ ಚಿನ್ನ: 61,100 ರೂಪಾಯಿ (+160 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 56,050 ರೂಪಾಯಿ (+300 ರೂಪಾಯಿ)
24 ಕ್ಯಾರೆಟ್ ಚಿನ್ನ: 61,150 ರೂಪಾಯಿ (+340 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 56,050 ರೂಪಾಯಿ (+300 ರೂಪಾಯಿ)
24 ಕ್ಯಾರೆಟ್ ಚಿನ್ನ: 61,150 ರೂಪಾಯಿ (+340 ರೂಪಾಯಿ)


Click it and Unblock the Notifications