ಬಂಗಾರ ದರ ಹಾಗೂ ಬೆಳ್ಳಿ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಿನ್ನೆ ಇಳಿಕೆಯಾಗಿದ್ದ ಗೋಲ್ಡ್ ರೇಟ್ ಇಂದು ಅಷ್ಟೇ ಪ್ರಮಾಣದಲ್ಲಿ ಏರಿಕೆಯನ್ನು ಕಂಡಿದೆ. ಈ ಹಿಂದೆ ದರವು ಸ್ಥಿರವಾಗಿತ್ತು. ಅದಕ್ಕೂ ಮುನ್ನ ಹೆಚ್ಚಳವಾಗಿದೆ. ಬೆಳ್ಳಿ ದರವು ಕೂಡಾ ಹೀಗೆಯೇ ನಿರಂತರವಾಗಿ ಏರಿಳಿತವನ್ನು ಕಾಣುತ್ತಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಹೆಚ್ಚಳವಾಗಿದೆ.
ಈ ಹಿಂದೆ ಜೂನ್ 6ರಂದು ಬಂಗಾರ ದರವು ಏರಿಕೆಯಾಗಿದೆ. ಇದಾದ ಬಳಿಕ ಜೂನ್ 9ರಂದೇ ಗೋಲ್ಡ್ ರೇಟ್ ಏರಿಕೆ ಕಂಡಿದೆ. ಜೂನ್ 8ರಂದು ಹತ್ತು ಗ್ರಾಂ 22 ಕ್ಯಾರೆಟ್ನ ಚಿನ್ನದ ದರವು 55,200 ರೂಪಾಯಿಯಿಂದ 55,600 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,220 ರೂಪಾಯಿಯಿಂದ 60,650 ರೂಪಾಯಿಗೆ ಹೆಚ್ಚಳ ಕಂಡಿದೆ. ಇನ್ನು ಬೆಳ್ಳಿ ದರ ಇಂದು ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 1 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಜೂನ್ 8ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 400 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 55,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 430 ರೂಪಾಯಿ ಏರಿಕೆ ಕಂಡಿದ್ದು ಪ್ರಸ್ತುತ 60,650 ರೂಪಾಯಿ ಆಗಿದೆ. ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 1100 ರೂಪಾಯಿ ಏರಿಕೆ ಕಂಡಿದ್ದು ಪ್ರಸ್ತುತ 74,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 9ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59895.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 74044.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.05ರಷ್ಟು ಇಳಿಕೆಯಾಗಿದ್ದು 1,964.36 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.58ರಷ್ಟು ಹಿಗ್ಗಿದ್ದು 24.41 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,730 ರೂಪಾಯಿ (+430 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+430 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,830 ರೂಪಾಯಿ (+460 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+430 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,730 ರೂಪಾಯಿ (+460 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,730 ರೂಪಾಯಿ (+460 ರೂಪಾಯಿ)


Click it and Unblock the Notifications