ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತವಾಗುತ್ತಿದೆ. ಆದರೆ ಚಿನ್ನದ ಬೆಲೆಯು ಈ ವಾರವು ಭಾರೀ ಏರಿಕೆಯಾಗಿದೆ. ಸತತ ಮೂರು ದಿನಗಳಿಂದ ಬಂಗಾರ ದರವು ಹೆಚ್ಚಳವಾಗಿದೆ. ಅದಕ್ಕೂ ಮುನ್ನ ಎರಡು ದಿನ ಕೊಂಚ ಇಳಿಕೆಯಾಗಿತ್ತು. ಇತ್ತೀಚೆಗೆ ಹಳದಿ ಲೋಹದ ದರವು ಸಾರ್ವಕಾಲಿಕವಾಗಿ ಏರಿಕೆ ಕಂಡಿದೆ.
ಕಳೆದ ಮೂರು ದಿನಗಳಲ್ಲಿ ಚಿನ್ನದ ಬೆಲೆಯು 460 ರೂಪಾಯಿ ಏರಿಕೆಯಾಗಿದೆ. ಅದಕ್ಕೂ ಎರಡು ದಿನಕ್ಕೂ ಮುನ್ನ ಬಂಗಾರ ದರ 700 ರೂಪಾಯಿ ಇಳಿಕೆಯಾಗಿದೆ. ಮೇ 10ರಂದು ಹತ್ತು ಗ್ರಾಂ ಚಿನ್ನದ ದರವು 56,700 ರೂಪಾಯಿಯಿಂದ 56,950 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 61,850 ರೂಪಾಯಿಯಿಂದ 62,130 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರವು ಕೂಡಾ ಇಂದು ಇಳಿಕೆಯಾಗಿದೆ.

ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಪ್ರಮುಖವಾಗಿ ಇದು ಮದುವೆ ಸೀಸನ್ ಆದ ಕಾರಣದಿಂದಾಗಿ ಹಳದಿ ಲೋಹಕ್ಕೆ ಬೇಡಿಕೆ ಅಧಿಕವಾಗಿ ದರವು ಕೂಡಾ ಅಧಿಕವಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 2 ಬಾರಿ ಇಳಿದಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 6 ಬಾರಿ ಏರಿಕೆಯಾಗಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 5 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಮೇ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 250 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 56,950 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 280 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 62,130 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 78,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 10ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 61231.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 77509.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.33ರಷ್ಟು ಕುಗ್ಗಿದ್ದು 2,029.63 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.08ರಷ್ಟು ಏರಿಕೆಯಾಗಿದ್ದು 25.66 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 57,000 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 62,180 ರೂಪಾಯಿ (+280 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 56,950 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 62,130 ರೂಪಾಯಿ (+280 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 57,100 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 62,280 ರೂಪಾಯಿ (+280 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 56,950 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 62,130 ರೂಪಾಯಿ (+280 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 57,000 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 62,180 ರೂಪಾಯಿ (+280 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 57,000 ರೂಪಾಯಿ (+250 ರೂಪಾಯಿ)
24 ಕ್ಯಾರೆಟ್ ಚಿನ್ನ: 62,180 ರೂಪಾಯಿ (+280 ರೂಪಾಯಿ)
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications