ಬಂಗಾರ ದರವು ಇಂದು ಸ್ಥಿರವಾಗಿದೆ. ಈ ಹಿಂದೆ ಹಲವಾರು ಬಾರಿ ಹಳದಿ ಲೋಹವು ಹೆಚ್ಚಳ ಕಂಡಿದೆ. ನಾವು ಕಳೆದ ಹತ್ತು ದಿನಗಳ ಬೆಳವಣಿಗೆಯನ್ನು ನೋಡಿದಾಗ ಬಂಗಾರವು ದುಬಾರಿಯಾಗುತ್ತಾ ಸಾಗಿರುವುದು ಕಂಡು ಬಂದಿದೆ. ಇನ್ನು ಇಂದು ಬೆಳ್ಳಿ ದರವು ಕೂಡಾ ಸ್ಥಿರವಾಗಿದೆ.
ಮೇ 11ರಂದು ಸ್ಥಿರವಾಗಿದೆ. ಅದಾದ ಮರುದಿನವೇ ಇಳಿಕೆ ಕಂಡಿದ್ದು, ನಿನ್ನೆ ಮತ್ತೆ ಹೆಚ್ಚಳವಾಗಿದೆ. ಇಂದು ಮತ್ತೆ ಸ್ಥಿರವಾಗಿದೆ. ಮೇ 14ರಂದು ಹತ್ತು ಗ್ರಾಂ ಚಿನ್ನದ ದರವು 56,650 ರೂಪಾಯಿ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 61,800 ರೂಪಾಯಿ ಆಗಿದೆ. ಬೆಳ್ಳಿ ದರ ಇಂದು ಸ್ಥಿರವಾಗಿದೆ.

ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಪ್ರಮುಖವಾಗಿ ಇದು ಮದುವೆ ಸೀಸನ್ ಆದ ಕಾರಣದಿಂದಾಗಿ ಹಳದಿ ಲೋಹಕ್ಕೆ ಬೇಡಿಕೆ ಅಧಿಕವಾಗಿ ದರವು ಕೂಡಾ ಅಧಿಕವಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಕೊಂಚ ಏರಿಕೆಯಾಗಿದ್ದ ಚಿನ್ನದ ದರವು ಇಂದು ಸ್ಥಿರವಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 1 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಮೇ 14ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ ಸ್ಥಿರವಾಗಿದ್ದು ಪ್ರಸ್ತುತ 56,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಯಥಾಸ್ಥಿತಿ ಕಾಯ್ದುಕೊಂಡಿದ್ದು ಪ್ರಸ್ತುತ 61,800 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 74,800 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 12ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 60635.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 73100.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.26ರಷ್ಟು ಕುಗ್ಗಿದ್ದು 2,011.05 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.77ರಷ್ಟು ಇಳಿಕೆಯಾಗಿದ್ದು 23.98 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 56,700 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 61,850 ರೂಪಾಯಿ (---------)
ಮುಂಬೈ
22 ಕ್ಯಾರೆಟ್ ಚಿನ್ನ: 56,650 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 61,800 ರೂಪಾಯಿ (---------)
ದೆಹಲಿ
22 ಕ್ಯಾರೆಟ್ ಚಿನ್ನ: 56,800 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 61,950 ರೂಪಾಯಿ (---------)
ಕೇರಳ
22 ಕ್ಯಾರೆಟ್ ಚಿನ್ನ: 56,650 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 61,800 ರೂಪಾಯಿ (---------)
ಮಂಗಳೂರು
22 ಕ್ಯಾರೆಟ್ ಚಿನ್ನ: 56,700 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 61,850 ರೂಪಾಯಿ (---------)
ಮೈಸೂರು
22 ಕ್ಯಾರೆಟ್ ಚಿನ್ನ: 56,700 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 61,850 ರೂಪಾಯಿ (---------)


Click it and Unblock the Notifications