ಸತತ ಮೂರು ದಿನಗಳಿಂದ ಬಂಗಾರ ಬೆಲೆಯು ಇಳಿಕೆಯಾಗುತ್ತಿದೆ. ಎರಡು ದಿನಗಳ ಕಾಲ ಕುಸಿತ ಕಂಡಿದ್ದ ಬಂಗಾರ ದರವು ಮೇ 24ರಂದು ಏರಿಕೆ ಕಂಡಿದೆ, ಅದಾದ ಬಳಿಕ ಸತತ ಮೂರು ದಿನಗಳಿಂದ ಗೋಲ್ಡ್ ರೇಟ್ ಇಳಿಕೆಯಾಗುತ್ತಿದೆ. ಈ ನಡುವೆ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಬೆಳ್ಳಿ ದರವು ಕೊಂಚ ಏರಿಕೆಯಾಗಿದೆ.
ಒಂದು ಕೆಜಿ ಬೆಳ್ಳಿ ದರ ಬರೀ ನೂರು ರೂಪಾಯಿ ಏರಿಕೆಯಾಗಿದೆ. ಆದರೆ ಹಲವಾರು ದಿನಗಳಿಂದ ಬೆಳ್ಳಿ ದರವು ಕುಗ್ಗುತ್ತಲೇ ಇದೆ. ಮೇ 27ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,650 ರೂಪಾಯಿಯಿಂದ 55,550 ರೂಪಾಯಿಗೆ ತಲುಪಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 61,710 ರೂಪಾಯಿಯಿಂದ 60,600 ರೂಪಾಯಿಗೆ ಇಳಿದಿದೆ. ಬೆಳ್ಳಿ ದರ ಇಂದು ಮತ್ತೆ ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 4 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 1 ಬಾರಿ ಏರಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 7 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 1 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 7 ಬಾರಿ ಇಳಿದಿದೆ. 1 ಬಾರಿ ಸ್ಥಿರವಾಗಿದೆ.
ಮೇ 27ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 55,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಇಳಿಕೆ ಕಂಡಿದ್ದು ಪ್ರಸ್ತುತ 60,600 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂಪಾಯಿ ಏರಿಕೆ ಕಂಡು ಪ್ರಸ್ತುತ 73,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 26ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59372.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 71291.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.32ರಷ್ಟು ಹಿಗ್ಗಿದ್ದು 1,946.67 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.70ರಷ್ಟು ಏರಿಕೆಯಾಗಿದ್ದು 23.32 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (-110 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (-110 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,650 ರೂಪಾಯಿ (-150 ರೂಪಾಯಿ)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (-110 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (-110 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (-110 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (-110 ರೂಪಾಯಿ)


Click it and Unblock the Notifications