ಭಾರತದ ಪ್ರಮುಖ ನಗರಗಳಲ್ಲಿ ಸತತ ಎರಡು ದಿನಗಳಿಂದ ಬಂಗಾರ ದರವು ಸ್ಥಿರವಾಗಿದೆ. ಭಾನುವಾರ ಹಾಗೂ ಸೋಮವಾರ ಗೋಲ್ಡ್ ರೇಟ್ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಇನ್ನು ಬೆಳ್ಳಿ ದರವು ಕೂಡಾ ಸ್ಥಿರವಾಗಿದೆ. ಸತತ ಮೂರು ದಿನಗಳಿಂದ ಬಂಗಾರ ಬೆಲೆಯು ಇಳಿಕೆಯಾಗುತ್ತಿತ್ತು. ಅದಾದ ಬಳಿಕ ಸ್ಥಿರವಾಗಿದೆ.
ಮೇ 24ರಂದು ಬಂಗಾರ ದರ ಏರಿದೆ, ಅದಾದ ಬಳಿಕ ದರ ಏರಿಕೆಯೇ ಆಗಿಲ್ಲ. ಮೇ 29ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,550 ರೂಪಾಯಿ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,600 ರೂಪಾಯಿ ಆಗಿದೆ. ಬೆಳ್ಳಿ ದರ ಇಂದು ಮತ್ತೆ ಸ್ಥಿರವಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಸ್ಥಿರವಾಗಿದ್ದ ಚಿನ್ನದ ದರವು ಇಂದು ಸ್ಥಿರವಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಮತ್ತೆ ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಮೇ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ ಸ್ಥಿರವಾಗಿದ್ದು ಪ್ರಸ್ತುತ 55,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಯಥಾಸ್ಥಿತಿ ಕಾಯ್ದುಕೊಂಡಿದ್ದು ಪ್ರಸ್ತುತ 60,600 ರೂಪಾಯಿ ಆಗಿದೆ. ಇಂದು ಬೆಳ್ಳಿ ದರವೂ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 73,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 29ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59435.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 71185.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.07ರಷ್ಟು ಇಳಿಕೆಯಾಗ್ಗಿದ್ದು 1,942.69 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.23ರಷ್ಟು ಕುಗ್ಗಿದ್ದು 23.24 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (--------)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (--------)
ಮುಂಬೈ
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (--------)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (--------)
ದೆಹಲಿ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (--------)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (--------)
ಕೇರಳ
22 ಕ್ಯಾರೆಟ್ ಚಿನ್ನ: 55,550 ರೂಪಾಯಿ (--------)
24 ಕ್ಯಾರೆಟ್ ಚಿನ್ನ: 60,600 ರೂಪಾಯಿ (--------)
ಮಂಗಳೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (--------)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (--------)
ಮೈಸೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (--------)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (--------)


Click it and Unblock the Notifications