ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಈ ಹಿಂದೆ ಏಪ್ರಿಲ್ 29ರಂದು ಬಂಗಾರ ದರವು ಕೊಂಚ ಏರಿಕೆಯಾಗಿದೆ. ಅದಾದ ಮೂರು ದಿನಗಳ ಬಳಿಕ ಗೋಲ್ಡ್ ರೇಟ್ ದಿಡೀರ್ ಆಗಿ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಲ್ಲಿ ಎರಡು ಬಾರಿ ದರ ಸ್ಥಿರವಾಗಿದೆ, ಒಮ್ಮೆ ಕುಸಿತವಾಗಿದೆ. ಮೇ 3ರಂದು ಹತ್ತು ಗ್ರಾಂ ಚಿನ್ನದ ದರವು 55,700 ರೂಪಾಯಿಯಿಂದ 56,500 ರೂಪಾಯಿಗೆ ಏರಿಕೆಯಾಗಿದೆ.
ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,760 ರೂಪಾಯಿಯಿಂದ 61,640 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಕಳೆದ ಮೂರು ದಿನಗಳಲ್ಲಿ ಏರಿಕೆ ಇಳಿಕೆ ನಿರಂತರವಾಗಿದೆ. ಆದರೆ ಚಿನ್ನ ಈಗಲೂ ದುಬಾರಿಯಾಗಿದೆ. ಕೆಲವೊಂದು ನಗರದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕವಾಗಿ ಹೆಚ್ಚಳವಾಗಿದೆ. ಅದು ಕೂಡಾ ಈಗ ಮದುವೆ ಸೀಸನ್ ಆದ ಕಾರಣ ಹಳದಿ ಲೋಹ ದುಬಾರಿಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
ನಿನ್ನೆ ಸ್ಥಿರವಾಗಿದ್ದ ಚಿನ್ನದ ದರವು ಇಂದು ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 1 ಬಾರಿ ಇಳಿದಿದೆ. 2 ಬಾರಿ ಸ್ಥಿರತೆ ಕಾಯ್ದುಕೊಂಡಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಮೇ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 800 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 56,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 880 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 61,640 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ 700 ರೂಪಾಯಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 76,800 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 3ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 60728.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 75162.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.01ರಷ್ಟು ಹಿಗ್ಗಿದ್ದು 2,016.18 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.07ರಷ್ಟು ಇಳಿಕೆಯಾಗಿದ್ದು 25.35 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 56,550 ರೂಪಾಯಿ (+800 ರೂಪಾಯಿ)
24 ಕ್ಯಾರೆಟ್ ಚಿನ್ನ: 61,690 ರೂಪಾಯಿ (+880 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 56,500 ರೂಪಾಯಿ (+800 ರೂಪಾಯಿ)
24 ಕ್ಯಾರೆಟ್ ಚಿನ್ನ: 61,640 ರೂಪಾಯಿ (+880 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 56,650 ರೂಪಾಯಿ (+800 ರೂಪಾಯಿ)
24 ಕ್ಯಾರೆಟ್ ಚಿನ್ನ: 61,790 ರೂಪಾಯಿ (+880 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 56,500 ರೂಪಾಯಿ (+800 ರೂಪಾಯಿ)
24 ಕ್ಯಾರೆಟ್ ಚಿನ್ನ: 61,640 ರೂಪಾಯಿ (+880 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 56,550 ರೂಪಾಯಿ (+800 ರೂಪಾಯಿ)
24 ಕ್ಯಾರೆಟ್ ಚಿನ್ನ: 61,690 ರೂಪಾಯಿ (+880 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 56,550 ರೂಪಾಯಿ (+800 ರೂಪಾಯಿ)
24 ಕ್ಯಾರೆಟ್ ಚಿನ್ನ: 61,690 ರೂಪಾಯಿ (+880 ರೂಪಾಯಿ)


Click it and Unblock the Notifications