ಸತತ ಎರಡು ದಿನಗಳ ಕಾಲ ಸ್ಥಿರವಾಗಿದ್ದ ಬಂಗಾರ ದರವು ಮೇ 30ರಂದು ಇಳಿಕೆಯಾಗಿದೆ. ಆದರೆ ಇಂದು ಏರಿಕೆಯಾಗಿದೆ. ಈ ನಡುವೆ ನಾವು ಕಳೆದ ಕೆಲವು ದಿನಗಳಲ್ಲಿ ಬಂಗಾರ ಹಾಗೂ ಬೆಳ್ಳಿ ದರದ ಏರಿಳಿತವನ್ನು ಪರಿಶೀಲನೆ ಮಾಡಿದಾಗ, ಹಳದಿ ಲೋಹ ಏರಿಕೆಗಿಂದ ಅಧಿಕವಾಗಿ ಇಳಿಕೆಯಾಗಿದೆ. ಇನ್ನು ಬೆಳ್ಳಿ ದರವು ಕೂಡಾ ಇಂದು ಏರಿಕೆಯಾಗಿದೆ.
ಮೇ 24ರಂದು ಬಂಗಾರ ದರ ಏರಿದೆ, ಅದಾದ ಬಳಿಕ ಇಂದು ದರ ಏರಿಕೆ ಆಗಿದೆ. ಮೇ 31ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,450 ರೂಪಾಯಿಯಿಂದ 55,850 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,490 ರೂಪಾಯಿಯಿಂದ 60,930 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರ ಇಂದು ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. ಒಂದು ಬಾರಿ ಬಂಗಾರ ದರವು ಏರಿಕೆಯಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 6 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 6 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಮೇ 31ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 400 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 55,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಹಿಗ್ಗಿದ್ದು ಪ್ರಸ್ತುತ 60,930 ರೂಪಾಯಿ ಆಗಿದೆ. ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 4200 ರೂಪಾಯಿ ಹಿಗ್ಗಿದ್ದು ಪ್ರಸ್ತುತ 76,800 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 31ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59889.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು
71190.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಇಳಿಕೆಯಾಗ್ಗಿದ್ದು 1,956.57 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.11ರಷ್ಟು ಹಿಗ್ಗಿದ್ದು 23.23 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+450 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (+440 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 56,000 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 61,080 ರೂಪಾಯಿ (+440 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,930 ರೂಪಾಯಿ (+440 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+450 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (+400 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (+450 ರೂಪಾಯಿ)


Click it and Unblock the Notifications