ಸಾರ್ವಕಾಲಿಕವಾಗಿ ಏರಿಕೆ ಕಂಡ ಬಳಿಕ ಕೊಂಚ ಇಳಿಕೆ, ಸ್ಥಿರತೆ ಕಾಯ್ದುಕೊಳ್ಳುತ್ತಾ ಬಂದ ಚಿನ್ನದ ಬೆಲೆಯು ಸತತ ಎರಡು ದಿನಗಳು ಏರಿಕೆ ಕಾಣುತ್ತಿದೆ. ಈ ಹಿಂದೆ ಏಪ್ರಿಲ್ 29ರಂದು ಬಂಗಾರ ದರವು ಕೊಂಚ ಏರಿಕೆಯಾಗಿದೆ. ಅದಾದ ಬಳಿಕ ಮೇ 3, 4ರಂದು ಸತತ ಎರಡು ದಿನವು ಬಂಗಾರ ದರ ಹೆಚ್ಚಳ ಕಂಡಿದೆ. ಮೇ 4ರಂದು ಹತ್ತು ಗ್ರಾಂ ಚಿನ್ನದ ದರವು 56,500 ರೂಪಾಯಿಯಿಂದ 57,000 ರೂಪಾಯಿಗೆ ಏರಿಕೆಯಾಗಿದೆ.
ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 61,640 ರೂಪಾಯಿಯಿಂದ 62,180 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರವು ಕೂಡಾ ಇಂದು ಏರಿಕೆಯಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಅದರಲ್ಲೂ ಬೆಳ್ಳಿ ದರವು ಕಳೆದ ಮೂರು ದಿನಗಳಲ್ಲಿ ಒಟ್ಟಾಗಿ 1100 ರೂಪಾಯಿಯಷ್ಟು ಏರಿಕೆ ಕಂಡಿದೆ. ಪ್ರಮುಖವಾಗಿ ಇದು ಮದುವೆ ಸೀಸನ್ ಆದ ಕಾರಣದಿಂದಾಗಿ ಹಳದಿ ಲೋಹಕ್ಕೆ ಬೇಡಿಕೆ ಅಧಿಕವಾಗಿ ದರವು ಕೂಡಾ ಅಧಿಕವಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 1 ಬಾರಿ ಇಳಿದಿದೆ. 2 ಬಾರಿ ಸ್ಥಿರತೆ ಕಾಯ್ದುಕೊಂಡಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 2 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಮೇ 4ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 500 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 57,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 540 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 62,180 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ 300 ರೂಪಾಯಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 77,100 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 4ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 61184.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 75766.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.85ರಷ್ಟು ಕುಗ್ಗಿದ್ದು 2,035.01 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.53ರಷ್ಟು ಇಳಿಕೆಯಾಗಿದ್ದು 25.54 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 57,050 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 62,230 ರೂಪಾಯಿ (+540 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 57,000 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 62,180 ರೂಪಾಯಿ (+540 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 57,150 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 62,330 ರೂಪಾಯಿ (+540 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 57,000 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 62,180 ರೂಪಾಯಿ (+540 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 57,050 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 62,230 ರೂಪಾಯಿ (+540 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 57,050 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 62,230 ರೂಪಾಯಿ (+540 ರೂಪಾಯಿ)


Click it and Unblock the Notifications