ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತವಾಗುತ್ತಿದೆ. ಮೂರು ದಿನಗಳ ಕಾಲ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಅದಾದ ಬಳಿಕ ಎರಡು ದಿನಗಳ ಕಾಲ ಕೊಂಚ ಇಳಿಕೆಯಾಗಿದೆ. ಅದಾದ ಬಳಿಕ ಸತತ ಎರಡು ದಿನಗಳ ಕಾಲ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. 3 ದಿನಗಳ ಕಾಲ ಹಳದಿ ಲೋಹ ಏರಿಕೆಯಾದಾಗ ಚಿನ್ನದ ಬೆಲೆಯು ಸಾರ್ವಕಾಲಿಕ ಮಟ್ಟಕ್ಕೆ ಏರಿದೆ.
ಮೇ 3, 4, 5ರಂದು ಚಿನ್ನದ ದರವು ಏರಿಕೆಯಾಗಿದೆ. ಮೇ 6,7ರಂದು ಇಳಿಕೆಯಾಗಿದೆ. ಮೇ 8, 9ರಂದು ಮತ್ತೆ ಬೆಲೆ ಹೆಚ್ಚಳವಾಗಿದೆ. ಮೇ 9ರಂದು ಹತ್ತು ಗ್ರಾಂ ಚಿನ್ನದ ದರವು 56,600 ರೂಪಾಯಿಯಿಂದ 56,700 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 61,750 ರೂಪಾಯಿಯಿಂದ 61,850 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರವು ಕೂಡಾ ಇಂದು ಇಳಿಕೆಯಾಗಿದೆ.

ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಪ್ರಮುಖವಾಗಿ ಇದು ಮದುವೆ ಸೀಸನ್ ಆದ ಕಾರಣದಿಂದಾಗಿ ಹಳದಿ ಲೋಹಕ್ಕೆ ಬೇಡಿಕೆ ಅಧಿಕವಾಗಿ ದರವು ಕೂಡಾ ಅಧಿಕವಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 2 ಬಾರಿ ಇಳಿದಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 5 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಮೇ 9ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 56,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 61,850 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 78,100 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 9ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 61104.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 76941.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.07ರಷ್ಟು ಹಿಗ್ಗಿದ್ದು 2,023.07 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.50ರಷ್ಟು ಇಳಿಕೆಯಾಗಿದ್ದು 25.42 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 56,750 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 61,900 ರೂಪಾಯಿ (+100 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 56,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 61,850 ರೂಪಾಯಿ (+100 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 56,850 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 62,000 ರೂಪಾಯಿ (+100 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 56,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 61,850 ರೂಪಾಯಿ (+100 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 56,750 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 61,900 ರೂಪಾಯಿ (+100 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 56,750 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 61,900 ರೂಪಾಯಿ (+100 ರೂಪಾಯಿ)


Click it and Unblock the Notifications