ದೇಶದಲ್ಲಿ ಏಪ್ರಿಲ್ 3ರಂದು ಚಿನ್ನ ಹಾಗೂ ಬೆಳ್ಳಿ ದರವು ಸ್ಥಿರವಾಗಿದೆ. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದ್ದು, ಪ್ರಸ್ತುತ 47,950 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಇಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 20 ರೂ ಇಳಿಕೆ ಕಂಡಿದ್ದು, ಪ್ರಸ್ತುತ ಬೆಲೆಯು 52,460 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ. ಬೆಳ್ಳಿ ದರವು ಕೆಜಿಗೆ ಪ್ರಸ್ತುತ 66,800 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 3ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 51275.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.63ರಷ್ಟು ಇಳಿಕೆಯಾಗಿ 1,924.8 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ0.77ರಷ್ಟು ಕುಗ್ಗಿ 24.62 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,460 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,460 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,460 ರೂ. ಇದೆ. ಚೆನ್ನೈನಲ್ಲಿ 48,250 ರೂ. ಹಾಗೂ ಅಪರಂಜಿ 52,630 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,460 ರು ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
{photo-feature}


Click it and Unblock the Notifications