ಮೂರು ದಿನಗಳ ಕಾಲ ಇಳಿಕೆಯನ್ನು ಕಂಡಿದ್ದ ಬಂಗಾರ ದರವು ಕಳೆದ ಎರಡು ದಿನಗಳಿಂದ ಏರಿಳಿತ ಕಾಣುತ್ತಿದೆ. ಆಗಸ್ಟ್ 11ರಂದು 22 ಕ್ಯಾರೆಟ್ ಸ್ಥಿರವಾಗಿದ್ದರೆ, ಅದಾದ ಬಳಿಕ ಆಗಸ್ಟ್ 12 ರಂದು ಇಳಿಕೆಯಾಗಿದೆ. ಇನ್ನು 24 ಕ್ಯಾರೆಟ್‌ನ ಗೋಲ್ಡ್ ರೇಟ್ ನಾಲ್ಕು ದಿನಗಳಿಂದ ಇಳಿಕೆಯಾಗಿದೆ. ಆದರೆ ಶನಿವಾರ ಕೊಂಚ ಏರಿಕೆಯಾಗಿದೆ.
ಇನ್ನು ಬೆಳ್ಳಿ ದರವು ಕೂಡಾ ಬಂಗಾರದಂತೆ ನಿರಂತರವಾಗಿ ಇಳಿಕೆ ಕಾಣುತ್ತಾ ಬರುತ್ತಿದೆ. ಸತತವಾಗಿ ನಾಲ್ಕು ದಿನಗಳಿಂದ ಸಿಲ್ವರ್ ರೇಟ್ ಕುಸಿತ ಕಂಡಿದ್ದು, ಆದರೆ ನಿನ್ನೆ ಮತ್ತು ಇಂದು ಸ್ಥಿರವಾಗಿದೆ. ಒಟ್ಟಾಗಿ 4 ದಿನದಲ್ಲಿ 2100 ರೂಪಾಯಿ ಕುಗ್ಗಿದೆ. ಆಗಸ್ಟ್ 5ರಂದು ಬೆಳ್ಳಿ ಬೆಲೆ ಏರಿಕೆಯಾಗಿದ್ದು ಅದಾದ ಬಳಿಕ ಹೆಚ್ಚಳವಾಗಿಲ್ಲ. ಏರಿಕೆಗಿಂತ ಅಧಿಕ ದರ ಇಳಿಕೆ ಕಂಡು ಬಂದಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಸ್ಥಿರವಾಗಿದ್ದ ಬಂಗಾರ ದರವು ಇಂದು ಮತ್ತೆ ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ4 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 1 ಬಾರಿ ಬಂಗಾರ ದರವು ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 1 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಸ್ಥಿರವಾಗಿದೆ. 6 ಬಾರಿ ಇಳಿಕೆಯಾಗಿದೆ.
ಆಗಸ್ಟ್ 12ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 50 ರೂಪಾಯಿ ಇಳಿಕೆಯಾಗಿದ್ದು 54,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 59,620 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಸ್ಥಿರವಾಗಿದ್ದು ಪ್ರಸ್ತುತ 73,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಆಗಸ್ಟ್ 11ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 58906.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 69967.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.07ರಷ್ಟು ಏರಿಕೆ ಕಂಡಿದ್ದು 1,913.83 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.01ರಷ್ಟು ಹಿಗ್ಗಿದ್ದು 22.69 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,650 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,620 ರೂಪಾಯಿ (+110 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,650 ರೂಪಾಯಿ (--50 ರೂಪಾಯಿ)
24 ಕ್ಯಾರೆಟ್ ಚಿನ್ನ: 59,620 ರೂಪಾಯಿ (+110 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,800 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,770 ರೂಪಾಯಿ (+110 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,650 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,620 ರೂಪಾಯಿ (+110 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,650 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,620 ರೂಪಾಯಿ (+110 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,650 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,620 ರೂಪಾಯಿ (+110 ರೂಪಾಯಿ)


Click it and Unblock the Notifications