ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಾ ಬರುತ್ತಿದೆ. ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ ಕಾಣುತ್ತಿದೆ. ಹೀಗಿರುವಾಗ ನಾವು ಒಟ್ಟಾರೆಯಾಗಿ ಕಳೆದ ಹತ್ತು ದಿನಗಳಲ್ಲಿ ಚಿನ್ನದ ದರವನ್ನು ಪರಿಶೀಲಸಿದಾಗ 900 ರೂಪಾಯಿ ಕುಸಿತ ಕಂಡಿದ್ದರೆ, 850 ರೂಪಾಯಿ ಜಿಗಿತ ಕಂಡಿದೆ. ಏರಿಕೆ ಇಳಿಕೆ ನೋಡಿದಾಗ ಬರೀ 50 ರೂಪಾಯಿ ವ್ಯತ್ಯಯವನ್ನು ನೋಡಬಹುದಾಗಿದೆ.
ಆಗಸ್ಟ್ 2ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,400 ರೂಪಾಯಿಯಿಂದ 55,100 ರೂಪಾಯಿಗೆ ಇಳಿಕೆ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,330 ರೂಪಾಯಿಯಿಂದ 60,110 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಬೆಳ್ಳಿ ದರವನ್ನು ನೋಡಿದಾಗ ನಿರಂತರವಾಗಿ ಏರಿಳಿತ ಕಂಡಿದೆ. ನಿನ್ನೆ ಹೆಚ್ಚಳವಾಗಿದ್ದ ದರ ಇಂದು ಇಳಿಕೆಯಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಬಂಗಾರ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 2 ಬಾರಿ ಏರಿಕೆಯಾಗಿದೆ. ಒಂದು ಬಾರಿ ಮಾತ್ರ ಬಂಗಾರ ದರವು ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಬೆಳ್ಳಿ ದರ ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಸ್ಥಿರವಾಗಿದೆ. 4 ಬಾರಿ ಇಳಿಕೆಯಾಗಿದೆ.
ಆಗಸ್ಟ್ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 300 ರೂಪಾಯಿ ಇಳಿಕೆಯಾಗಿದ್ದು 55,100 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 330 ರೂಪಾಯಿ ಕುಸಿತ ಕಂಡಿದ್ದು, ಪ್ರಸ್ತುತ 60,110 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 700 ರೂಪಾಯಿ ಹೆಚ್ಚಾಗಿದ್ದು ಪ್ರಸ್ತುತ 77,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಆಗಸ್ಟ್ 2ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59288.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 74379.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.08ರಷ್ಟು ಇಳಿಕೆ ಕಂಡಿದ್ದು 1,950.62 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.29ರಷ್ಟು ಕುಗ್ಗಿದ್ದು 24.33 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-330 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-330 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,250 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 60,260 ರೂಪಾಯಿ (-330 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-330 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-330 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-330 ರೂಪಾಯಿ)

Click it and Unblock the Notifications