ಕಳೆದ ಕೆಲವು ದಿನಗಳಿಂದ ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಒಂದು ದಿನ ಹೆಚ್ಚಳವಾದರೆ ಮತ್ತೊಂದು ದಿನ ಇಳಿಕಯುತ್ತಿದೆ. ಇನ್ನು ನಾವು ಕಳೆದ ಹತ್ತು ದಿನಗಳ ಬೆಳವಣಿಗೆಯನ್ನು ನೋಡಿದಾಗ ಬಂಗಾರ ದರವು ಸರಿಸಮವಾಗಿ ಏರಿಕೆ, ಇಳಿಕೆಯನ್ನು ಕಂಡಿದೆ. ಸತತವಾಗಿ ಎರಡು ದಿನಗಳಿಂದ ಇಳಿಕೆಯಾಗಿದ್ದ ಬಂಗಾರ ದರವು ಇಂದು ಸ್ಥಿರತೆಯನ್ನು ಕಾಯ್ದುಕೊಂಡಿದೆ.
ಆಗಸ್ಟ್ 4ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 54,950 ರೂಪಾಯಿ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 59,950 ರೂಪಾಯಿ ಆಗಿದೆ. ಇನ್ನು ಬೆಳ್ಳಿ ದರವನ್ನು ನೋಡಿದಾಗ ನಿರಂತರವಾಗಿ ಏರಿಳಿತ ಕಂಡಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರ ಇಂದು ಮತ್ತೆ ಇಳಿಕೆಯಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಬಂಗಾರ ದರವು ಇಂದು ಸ್ಥಿರವಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 1 ಬಾರಿ ಏರಿಕೆಯಾಗಿದೆ. ಒಂದು ಬಾರಿ ಬಂಗಾರ ದರವು ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಬೆಳ್ಳಿ ದರ ಸತತವಾಗಿ ಮೂರು ದಿನಗಳಿಂದ ಇಳಿಕೆಯಾಗುತ್ತಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಸ್ಥಿರವಾಗಿದೆ. 4 ಬಾರಿ ಇಳಿಕೆಯಾಗಿದೆ.
Gold Rate Today: ಚಿನ್ನ, ಬೆಳ್ಳಿ ದರ ಕುಸಿತ, ಆಗಸ್ಟ್ 2ರ ಬೆಲೆ ಪರಿಶೀಲಿಸಿ
ಆಗಸ್ಟ್ 4ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ ಸ್ಥಿರವಾಗಿದ್ದು 54,950 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಯಥಾಸ್ಥಿತಿ ಕಾಯ್ದುಕೊಂಡಿದ್ದು ಪ್ರಸ್ತುತ 59,950 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 74,800 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಆಗಸ್ಟ್ 4ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 59379.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 72253.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.12ರಷ್ಟು ಇಳಿಕೆ ಕಂಡಿದ್ದು 1,933.54 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.43ರಷ್ಟು ಕುಗ್ಗಿದ್ದು 23.5 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (---------)
ಮುಂಬೈ
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (---------)
ದೆಹಲಿ
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 60,100 ರೂಪಾಯಿ (---------)
ಕೇರಳ
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (---------)
ಮಂಗಳೂರು
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (---------)
ಮೈಸೂರು
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (---------)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (---------)

Click it and Unblock the Notifications