ಜನವರಿ 9ರಂದು ದೇಶದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ದೇಶದ ಪ್ರಮುಖ ನಗರಗಳಲ್ಲಿ ಏರಿಳಿತ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಚಿನ್ನದ ಬೆಲೆಯು 46,610 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರವು 10 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ 48,610 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಇಂದು ಸ್ಥಿರವಾಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 60,700 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,610 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,660 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,610 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,610 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,760 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,010 ರೂ. ಇದೆ. ಚೆನ್ನೈನಲ್ಲಿ 44,930 ರೂ. ಹಾಗೂ ಅಪರಂಜಿ 49,010 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,860 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,560 ರು ಇದೆ.
{photo-feature}


Click it and Unblock the Notifications