ಕಳೆದ ಕೆಲವು ದಿನಗಳಿಂದ ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಾವು ಕಳೆದ ಹತ್ತು ದಿನಗಳ ಬೆಲೆಯನ್ನು ಪರಿಶೀಲನೆ ಮಾಡಿದಾಗ ಬಂಗಾರ ದರವು ಇಳಿಕೆಗಿಂತ ಅಧಿಕ ಹೆಚ್ಚಳವಾಗಿದೆ. ಹತ್ತು ದಿನದಲ್ಲಿ 1170 ರೂಪಾಯಿ ಹತ್ತು ಗ್ರಾಂ ಚಿನ್ನದ ಬೆಲೆಯು ಏರಿಕೆಯಾಗಿದೆ. ಆದರೆ 120 ರೂಪಾಯಿ ಮಾತ್ರ ದರವು ಕುಸಿತ ಕಂಡಿದೆ.
ಜುಲೈ 19ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,100 ರೂಪಾಯಿಯಿಂದ 55,600 ರೂಪಾಯಿಗೆ ಹೆಚ್ಚಳ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,100 ರೂಪಾಯಿಯಿಂದ 60,650 ರೂಪಾಯಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಬಂಗಾರ ದರವು ಏರಿಕೆ ಕಂಡಿದೆ. ಅದಕ್ಕೂ ಒಂದು ದಿನ ಮುನ್ನ 20 ರೂಪಾಯಿ ಕುಸಿದಿದ್ದು, ಅದಕ್ಕೂ ಮುನ್ನ ಸ್ಥಿರವಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಕೊಂಚ ಏರಿಕೆಯಾಗಿದ್ದ ಬಂಗಾರ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 1 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 2 ಬಾರಿ ಮಾತ್ರ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 2 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ. ಸತತ ಮೂರದು ದಿನಗಳಿಂದ ಬೆಳ್ಳಿ ದರ ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 8 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಸ್ಥಿರವಾಗಿದೆ.
ಜುಲೈ 19ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು 54,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಹೆಚ್ಚಳವಾಗಿದ್ದು, ಪ್ರಸ್ತುತ 59,070 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 500 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 71,900 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜುಲೈ 19ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59835.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 76189.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.01ರಷ್ಟು ಹೆಚ್ಚಳವಾಗಿದ್ದು 1,977.65 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.03ರಷ್ಟು ಹಿಗ್ಗಿದ್ದು 25.06 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+550 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+550 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (+620 ರೂಪಾಯಿ)
24 ಕ್ಯಾರೆಟ್ ಚಿನ್ನ: 60,800 ರೂಪಾಯಿ (+670 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+550 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+550 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,600 ರೂಪಾಯಿ (+500 ರೂಪಾಯಿ)
24 ಕ್ಯಾರೆಟ್ ಚಿನ್ನ: 60,650 ರೂಪಾಯಿ (+550 ರೂಪಾಯಿ)

Click it and Unblock the Notifications