ಕಳೆದ ಕೆಲವು ದಿನಗಳಿಂದ ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಆದರೆ ಕಳೆದ ಮೂರು ದಿನಗಳಿಂದ ಸತತವಾಗಿ ಚಿನ್ನದ ಬೆಲೆಯು ಜಿಗಿತ ಕಾಣುತ್ತಿದೆ. ಮೂರು ದಿನದಲ್ಲೇ 770 ರೂಪಾಯಿ ಏರಿಕೆಯಾಗಿದೆ. ನಾವು ಕಳೆದ ಹತ್ತು ದಿನಗಳ ಬೆಲೆಯನ್ನು ಪರಿಶೀಲನೆ ಮಾಡಿದಾಗ ಬಂಗಾರ ದರವು ಇಳಿಕೆಗಿಂತ ಅಧಿಕ ಹೆಚ್ಚಳವಾಗಿರುವುದು ಕಾಣಬಹುದಾಗಿದೆ. ಹತ್ತು ದಿನದಲ್ಲಿ ಬರೀ ಒಂದು ಬಾರಿ ಅದು ಕೂಡಾ ಹತ್ತು ಗ್ರಾಂ ಬೆಲೆ 20 ರೂಪಾಯಿ ಕುಗ್ಗಿದೆ.
ಜುಲೈ 20ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,600 ರೂಪಾಯಿಯಿಂದ 55,700 ರೂಪಾಯಿಗೆ ಹೆಚ್ಚಳ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,650 ರೂಪಾಯಿಯಿಂದ 60,750 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಬೆಳ್ಳಿ ದರವನ್ನು ನೋಡಿದಾಗ ನಿರಂತರವಾಗಿ ಏರಿಕೆಯನ್ನು ಕಂಡಿದೆ. ಆದರೆ ಇಂದು ಮಾತ್ರ ಬೆಳ್ಳಿ ರೇಟ್ ಸ್ಥಿರವಾಗಿರುವುದನ್ನು ನಾವು ಗಮನಿಸಬಹುದಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಕೊಂಚ ಏರಿಕೆಯಾಗಿದ್ದ ಬಂಗಾರ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 1 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 3 ಬಾರಿ ಮಾತ್ರ ಏರಿಕೆಯಾಗಿದೆ. 1 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 1 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ. ಸತತ ಮೂರು ದಿನಗಳ ಕಾಲ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 7 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಸ್ಥಿರವಾಗಿದೆ.
ಜುಲೈ 20ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಏರಿಕೆಯಾಗಿದ್ದು 55,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಹೆಚ್ಚಳವಾಗಿದ್ದು, ಪ್ರಸ್ತುತ 60,750 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 78,400 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜುಲೈ 20ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59885.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 76543.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.22ರಷ್ಟು ಹೆಚ್ಚಳವಾಗಿದ್ದು 1,981.96 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.37ರಷ್ಟು ಹಿಗ್ಗಿದ್ದು 25.21 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (+100 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (+100 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,900 ರೂಪಾಯಿ (+100 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (+100 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (+100 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,750 ರೂಪಾಯಿ (+100 ರೂಪಾಯಿ)

Click it and Unblock the Notifications