ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಎರಡು ದಿನಗಳ ಕಾಲ ಸ್ಥಿರವಾಗಿದ್ದ ಚಿನ್ನದರ ದರವು ಸೋಮವಾರ ಹಾಗೂ ಮಂಗಳವಾರ, ಎರಡು ದಿನಗಳಿಂದ ಇಳಿಕೆ ಕಾಣುತ್ತಿದೆ. ಎರಡು ದಿನವೂ ಕೂಡಾ ಗೋಲ್ಡ್ ರೇಟ್ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ, ಕೊಂಚ ಪ್ರಮಾಣದಲ್ಲಿ ಮಾತ್ರ ಕುಸಿತ ಕಂಡಿದೆ. ಕಳೆದ ಹತ್ತು ದಿನಗಳ ಬೆಳವಣಿಗೆ ನಾವು ನೋಡಿದಾಗ ಬಂಗಾರ ದರ ಒಂದು ಬಾರಿ ಮಾತ್ರ ಏರಿಕೆಯಾಗಿದೆ.
ಜೂನ್ 20ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,070 ರೂಪಾಯಿಯಿಂದ 55,000 ರೂಪಾಯಿಗೆ ಇಳಿಕೆ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,070 ರೂಪಾಯಿಯಿಂದ 60,000 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಅದಕ್ಕೂ ಮುನ್ನ ಎರಡು ದಿನ ಸ್ಥಿರತೆ ಕಾಯ್ದುಕೊಂಡಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಬಂಗಾರ ದರವು ಇಂದು ಮತ್ತೆ ಕೊಂಚ ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. 1 ಬಾರಿ ಮಾತ್ರ ಏರಿಕೆಯಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 4 ಬಾರಿ ಸ್ಥಿರವಾಗಿದೆ.
ಜೂನ್ 20ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 70 ರೂಪಾಯಿ ಇಳಿಕೆಯಾಗಿದ್ದು 55,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 70 ರೂಪಾಯಿ ಕುಸಿತವನ್ನು ಕಂಡಿದ್ದು, ಪ್ರಸ್ತುತ 60,000 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 74,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 20ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59322.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 72469.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.08ರಷ್ಟು ಏರಿಕೆಯಾಗಿದ್ದು 1,953.82 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.33ರಷ್ಟು ಕುಗ್ಗಿದ್ದು 23.92 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,000 ರೂಪಾಯಿ (-120 ರೂಪಾಯಿ)
24 ಕ್ಯಾರೆಟ್ ಚಿನ್ನ: 60,000 ರೂಪಾಯಿ (-110 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,000 ರೂಪಾಯಿ (-70 ರೂಪಾಯಿ)
24 ಕ್ಯಾರೆಟ್ ಚಿನ್ನ: 60,000 ರೂಪಾಯಿ (-70 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,150 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 60,150 ರೂಪಾಯಿ (-60 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,000 ರೂಪಾಯಿ (-70 ರೂಪಾಯಿ)
24 ಕ್ಯಾರೆಟ್ ಚಿನ್ನ: 60,000 ರೂಪಾಯಿ (-70 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,000 ರೂಪಾಯಿ (-120 ರೂಪಾಯಿ)
24 ಕ್ಯಾರೆಟ್ ಚಿನ್ನ: 60,000 ರೂಪಾಯಿ (-110 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,000 ರೂಪಾಯಿ (-120 ರೂಪಾಯಿ)
24 ಕ್ಯಾರೆಟ್ ಚಿನ್ನ: 60,000 ರೂಪಾಯಿ (-110 ರೂಪಾಯಿ)


Click it and Unblock the Notifications