ಸತತ ಮೂರು ದಿನಗಳಿಂದ ಚಿನ್ನದ ಬೆಲೆಯು ಇಳಿಕೆ ಕಾಣುತ್ತಿದೆ. ಎರಡು ದಿನಗಳ ಕಾಲ ಸ್ಥಿರವಾಗಿದ್ದ ಚಿನ್ನದರ ದರವು ಸೋಮವಾರ ಹಾಗೂ ಮಂಗಳವಾರ ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಅದಾದ ಬಳಿಕ ಬಂಗಾರ ದರವು ಬುಧವಾರ ಕೊಂಚ ಅಧಿಕ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇನ್ನು ಜೂನ್ 16ರಂದು ಬೆಲೆಯು ಏರಿಕೆಯಾಗಿದ್ದು, ಅದಾದ ಬಳಿಕ ಹೆಚ್ಚಳವಾಗಿಲ್ಲ. ಒಟ್ಟಾರೆಯಾಗಿ ಕಳೆದ ಹತ್ತು ದಿನಗಳಲ್ಲಿ ಬಂಗಾರ ದರವು ಇಳಿಕೆಯೇ ಅಧಿಕವಾಗಿದೆ.
ಜೂನ್ 21ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,000 ರೂಪಾಯಿಯಿಂದ 54,700 ರೂಪಾಯಿಗೆ ಇಳಿಕೆ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,000 ರೂಪಾಯಿಯಿಂದ 59,670 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಅದಕ್ಕೂ ಮುನ್ನ ಎರಡು ದಿನ ಸ್ಥಿರತೆ ಕಾಯ್ದುಕೊಂಡು ನಿನ್ನೆ ಏರಿಕೆಯಾಗಿತ್ತು.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಕೊಂಚ ಇಳಿಕೆಯಾಗಿದ್ದ ಬಂಗಾರ ದರವು ಇಂದು ಮತ್ತೆ ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 6 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಜೂನ್ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 300 ರೂಪಾಯಿ ಇಳಿಕೆಯಾಗಿದ್ದು 54,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 330 ರೂಪಾಯಿ ಕುಸಿತವನ್ನು ಕಂಡಿದ್ದು, ಪ್ರಸ್ತುತ 59,670 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 1000 ರೂಪಾಯಿ ಕುಸಿತವಾಗಿದ್ದು ಪ್ರಸ್ತುತ 73,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 21ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 58776.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 70113.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.10ರಷ್ಟು ಇಳಿಕೆಯಾಗಿದ್ದು 1,935.24 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.44ರಷ್ಟು ಕುಗ್ಗಿದ್ದು 23.06 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,750 ರೂಪಾಯಿ (-250 ರೂಪಾಯಿ)
24 ಕ್ಯಾರೆಟ್ ಚಿನ್ನ: 59,720 ರೂಪಾಯಿ (-280 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,700 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 59,670 ರೂಪಾಯಿ (-330 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,850 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 59,820 ರೂಪಾಯಿ (-330 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,700 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 59,670 ರೂಪಾಯಿ (-330 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,750 ರೂಪಾಯಿ (-250 ರೂಪಾಯಿ)
24 ಕ್ಯಾರೆಟ್ ಚಿನ್ನ: 59,720 ರೂಪಾಯಿ (-280 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,750 ರೂಪಾಯಿ (-250 ರೂಪಾಯಿ)
24 ಕ್ಯಾರೆಟ್ ಚಿನ್ನ: 59,720 ರೂಪಾಯಿ (-280 ರೂಪಾಯಿ)


Click it and Unblock the Notifications