ಭಾರತದಲ್ಲಿ ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಒಂದು ದಿನ ಏರಿಕೆ ಮತ್ತೊಂದು ದಿನ ಇಳಿಕೆ, ಮತ್ತೆ ಸ್ಥಿರತೆ ಹೀಗೆ ಬೆಲೆಗಳು ಏರು ತಗ್ಗುಗಳನ್ನು ಕಾಣುತ್ತಿದೆ. ಸತತವಾಗಿ ಐದು ದಿನಗಳ ಕಾಲ ಬಂಗಾರ ದರವು ಇಳಿಕೆಯಾದ ಬಳಿಕ ಈ ಬೆಳವಣಿಗೆ ಕಂಡು ಬಂದಿದೆ. ನಿನ್ನೆ 22 ಗ್ರಾಂನ ಬಂಗಾರ ದರವು ಸ್ಥಿರವಾಗಿದ್ದರೆ, 24 ಗ್ರಾಂ ಚಿನ್ನದ ಬೆಲೆ ಮಾತ್ರ ಇಳಿಕೆಯಾಗಿದೆ. ಆದರೆ ಇಂದು ಎರಡು ಕೂಡಾ ಕುಸಿತ ಕಂಡಿದೆ.
ಜೂನ್ 28ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 54,350 ರೂಪಾಯಿಯಿಂದ 54,050 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 59,180 ರೂಪಾಯಿಯಿಂದ 58,960 ರೂಪಾಯಿಗೆ ಇಳಿಕೆಯಾಗಿದೆ. ಇನ್ನು ನಿರಂತರವಾಗಿ ಇಳಿಕೆಯನ್ನು ಕಾಣುತ್ತಿದ್ದ ಬೆಳ್ಳಿ ದರವು ಸೋಮವಾರ ಸ್ಥಿರವಾಗಿದ್ದು, ಮಂಗಳವಾರ ಕೊಂಚ ಏರಿಕೆಯಾಗಿದೆ. ಬುಧವಾರವೂ ಹೆಚ್ಚಳವಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಕೊಂಚ ಸ್ಥಿರವಾಗಿದ್ದ ಬಂಗಾರ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 1 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 2 ಬಾರಿ ಏರಿಕೆಯಾಗಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 6 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಜೂನ್ 28ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 300 ರೂಪಾಯಿ ಇಳಿಕೆಯಾಗಿದ್ದು 54,050 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 58,960 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 400 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 71,900 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 28ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 58078.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 69129.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.30ರಷ್ಟು ಇಳಿಕೆಯಾಗಿದ್ದು 1,909.88 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.33ರಷ್ಟು ಕುಗ್ಗಿದ್ದು 22.79 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,050 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 58,960 ರೂಪಾಯಿ (-320 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,050 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 58,960 ರೂಪಾಯಿ (-220 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,200 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 58,110 ರೂಪಾಯಿ (-320 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,050 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 58,960 ರೂಪಾಯಿ (-220 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,050 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 58,960 ರೂಪಾಯಿ (-320 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,050 ರೂಪಾಯಿ (-300 ರೂಪಾಯಿ)
24 ಕ್ಯಾರೆಟ್ ಚಿನ್ನ: 58,960 ರೂಪಾಯಿ (-320 ರೂಪಾಯಿ)


Click it and Unblock the Notifications