ನಿರಂತರವಾಗಿ ಏರಿಳಿತ ಕಾಣುತ್ತಿದ್ದ ಗೋಲ್ಡ್ ರೇಟ್ ಇಳಿಕೆ ಕಾಣುತ್ತಿದೆ. 22 ಕ್ಯಾರೆಟ್‌ನ ಚಿನ್ನದ ದರವು ಕಳೆದ ಎರಡು ದಿನಗಳಿಂದ ಕುಸಿತ ಕಂಡಿದ್ದರೆ, 24 ಕ್ಯಾರೆಟ್‌ನ ಬಂಗಾರ ದರವು ಕಳೆದ ಮೂರು ದಿನಗಳಿಂದ ಇಳಿಕೆಯಾಗುತ್ತಿದೆ. ಇದಕ್ಕೂ ಮುನ್ನ ಒಟ್ಟಾಗಿ ಸತತ ಐದು ದಿನಗಳ ಕಾಲ ಗೋಲ್ಡ್ ರೇಟ್ ಕುಸಿತ ಕಂಡಿದೆ. ಕಳೆದ ಕೆಲವು ದಿನಗಳ ಬೆಳವಣಿಗೆಯನ್ನು ನೋಡಿದಾಗ ಬಂಗಾರ ದರವು ಏರಿಕೆಗಿಂತ ಅಧಿಕ ಇಳಿಕೆಯಾಗಿದೆ.
ಜೂನ್ 29ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 54,050 ರೂಪಾಯಿಯಿಂದ 53,850 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 58,960 ರೂಪಾಯಿಯಿಂದ 58,750 ರೂಪಾಯಿಗೆ ಇಳಿಕೆಯಾಗಿದೆ. ಇನ್ನು ನಿರಂತರವಾಗಿ ಇಳಿಕೆಯನ್ನು ಕಾಣುತ್ತಿದ್ದ ಬೆಳ್ಳಿ ದರವು ಸೋಮವಾರ ಸ್ಥಿರವಾಗಿದ್ದು, ಮಂಗಳವಾರ ಕೊಂಚ ಏರಿಕೆಯಾಗಿದೆ. ಬುಧವಾರವೂ ಹೆಚ್ಚಳವಾಗಿದೆ. ಈಗ ಮತ್ತೆ ಸ್ಥಿರವಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಕೊಂಚ ಸ್ಥಿರವಾಗಿದ್ದ ಬಂಗಾರ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 1 ಬಾರಿ ಮಾತ್ರ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 6 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಜೂನ್ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಇಳಿಕೆಯಾಗಿದ್ದು 54,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 210 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 58,750 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಸ್ಥಿರವಾಗಿದ್ದು ಪ್ರಸ್ತುತ 71,900 ರೂಪಾಯಿ ಆಗಿದೆ.
ಜೂನ್ 29ರಂದು ಮಾರುಕಟ್ಟೆ ರಜೆಯಾಗಿದೆ. ಈ ನಡುವೆ ಕೊನೆಯ ಜೂನ್ 28ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 58080.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು
69075.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.17ರಷ್ಟು ಇಳಿಕೆಯಾಗಿದ್ದು 1,906.53 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.19ರಷ್ಟು ಹಿಗ್ಗಿದ್ದು 22.77 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 53,850 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 58,750 ರೂಪಾಯಿ (-210 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 53,850 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 58,750 ರೂಪಾಯಿ (-210 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,000 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 58,900 ರೂಪಾಯಿ (-210 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 53,850 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 58,750 ರೂಪಾಯಿ (-210 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 53,850 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 58,750 ರೂಪಾಯಿ (-210 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 53,850 ರೂಪಾಯಿ (-200 ರೂಪಾಯಿ)
24 ಕ್ಯಾರೆಟ್ ಚಿನ್ನ: 58,750 ರೂಪಾಯಿ (-210 ರೂಪಾಯಿ)

Click it and Unblock the Notifications