ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷದ ಏಪ್ರಿಲ್ ನಿಂದ ಅಕ್ಟೋಬರ್ ಮಧ್ಯೆ ಚಿನ್ನದ ಆಮದು 47.2% ಇಳಿಕೆ ಆಗಿದ್ದು, 928 ಕೋಟಿ ಅಮೆರಿಕನ್ ಡಾಲರ್ ಗೆ ತಲುಪಿದೆ. ವಾಣಿಜ್ಯ ಸಚಿವಾಲಯದ ದತ್ತಾಂಶದ ಪ್ರಕಾರ, 2019- 20ನೇ ಸಾಲಿನ ಇದೇ ಅವಧಿಯಲ್ಲಿ ಚಿನ್ನದ ಆಮದು 1764 ಕೋಟಿ ಅಮೆರಿಕನ್ ಡಾಲರ್ ಇತ್ತು.
ಆದರೂ ಅಕ್ಟೋಬರ್ ತಿಂಗಳಲ್ಲಿ ಆಮದು ಪ್ರಮಾಣ 36% ಬೆಳವಣಿಗೆ ದಾಖಲಿಸಿದೆ. ಬೆಳ್ಳಿ ಆಮದು ಕೂಡ ಈ ಅವಧಿಯಲ್ಲಿ 64.65 ಪರ್ಸೆಂಟ್ ಇಳಿಕೆ ಕಂಡು, 742 ಮಿಲಿಯನ್ ತಲುಪಿದೆ. ಚಿನ್ನ ಹಾಗೂ ಬೆಳ್ಳಿ ಆಮದಿನಲ್ಲಿ ಕಡಿಮೆ ಆಗಿರುವುದರಿಂದ ದೇಶದ ವಾಣಿಜ್ಯ ಕೊರತೆ ಕಡಿಮೆ ಆಗಲು ಕಾರಣ ಆಗಿದೆ.
ಆಮದು ಹಾಗೂ ಕೊರತೆ ಮಧ್ಯದ ವ್ಯತ್ಯಾಸ 2020- 21ರ ಏಪ್ರಿಲ್ - ಅಕ್ಟೋಬರ್ ಮಧ್ಯೆ 3216 ಕೋಟಿ ಅಮೆರಿಕನ್ ಡಾಲರ್ ಇದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 10,067 ಕೋಟಿ ಅಮೆರಿಕನ್ ಡಾಲರ್ ಇತ್ತು.

ವಿಶ್ವದಲ್ಲೇ ಅತಿ ಹೆಚ್ಚು ಚಿನ್ನವನ್ನು ಆಮದು ಮಾಡಿಕೊಳ್ಳುವ ದೇಶ ಭಾರತ. ಆಭರಣ ವಲಯದ ಬೇಡಿಕೆಯನ್ನೇ ಪ್ರಮುಖವಾಗಿ ಪೂರೈಸುತ್ತದೆ. ವಾರ್ಷಿಕವಾಗಿ ಎಂಟು ನೂರರಿಂದ ಒಂಬೈನೂರು ಟನ್ ಚಿನ್ನವನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತದೆ. ರತ್ನಗಳು ಮತ್ತು ಆಭರಣಗಳ ರಫ್ತು ಈ ವರ್ಷದ ಏಪ್ರಿಲ್ ನಿಂದ ಅಕ್ಟೋಬರ್ ಮಧ್ಯೆ 49.5 ಪರ್ಸೆಂಟ್ ಕುಸಿದು, 1161 ಕೋಟಿ ಅಮೆರಿಕನ್ ಡಾಲರ್ ತಲುಪಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications