ಕೋವಿಡ್-19 ಸಾಂಕ್ರಾಮಿಕದ ಪರಿಣಾಮ ಲಾಕ್‌ಡೌನ್ ಹಾಗೂ ಸಾಕಷ್ಟು ಆರ್ಥಿಕ ಹಾಗೂ ಉದ್ಯೋಗ ನಷ್ಟದ ನಡುವೆ ಭಾರತದಲ್ಲಿ ಕಳೆದ ಒಂದು ವರ್ಷದಲ್ಲಿ ಚಿನ್ನದ ಆಮದು ತಗ್ಗಿದೆ.
ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ ಏಪ್ರಿಲ್-ಫೆಬ್ರವರಿ 2020-21ರ ನಡುವೆ ಚಿನ್ನದ ಆಮದು ಪ್ರಮಾಣವು ಶೇಕಡಾ 3.3ರಷ್ಟು ಇಳಿಕೆಗೊಂಡು 26.11 ಬಿಲಿಯನ್ ಡಾಲರ್‌ಗೆ ತಲುಪಿದೆ. ಆದರೆ 2019-20ರ ಏಪ್ರಿಲ್-ಫೆಬ್ರವರಿ ಅವಧಿಯಲ್ಲಿ ಹಳದಿ ಲೋಹದ ಆಮದು 27 ಬಿಲಿಯನ್ ಡಾಲರ್‌ನಷ್ಟಿತ್ತು.

ಪ್ರಸಕ್ತ ಹಣಕಾಸು ವರ್ಷದ 11 ತಿಂಗಳ ಅವಧಿಯಲ್ಲಿ ದೇಶದ ವ್ಯಾಪಾರ ಕೊರತೆಯು 84.62 ಬಿಲಿಯನ್ ಡಾಲರ್‌ಗೆ ಇಳಿಕೆಯಾಗಿದ್ದು, ಇಂದು ಒಂದು ವರ್ಷದ ಹಿಂದೆ 151.37 ಬಿಲಿಯನ್ ಡಾಲರ್‌ನಷ್ಟಿತ್ತು.
ಭಾರತವು ಜಗತ್ತಿನಲ್ಲೇ ಅತಿದೊಡ್ಡ ಚಿನ್ನದ ಆಮದುದಾರ ರಾಷ್ಟ್ರಗಳಲ್ಲಿ ಒಂದಾಗಿದ್ದು, ಆಭರಣ ಕೈಗಾರಿಕೆಗಳು ಹೆಚ್ಚು ಬೇಡಿಕೆಯನ್ನು ಹೊಂದಿವೆ. ದೇಶವು ವಾರ್ಷಿಕವಾಗಿ 800 ರಿಂದ 900 ಟನ್ ಚಿನ್ನವನ್ನು ಆಮದು ಮಾಡಿಕೊಳ್ಳುತ್ತದೆ.
ದೇಶದ ಆಮದು-ರಫ್ತು ವಲಯವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇಕಡಾ 7.5ಕ್ಕೆ ಇಳಿಸಿದೆ. ಆದಾಗ್ಯೂ ಇದು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಅನ್ನು ಶೇಕಡಾ 2.5ರಷ್ಟು ಹೊಂದಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications