ಮೇ 14,ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹಾವು-ಏಣಿ ಆಟ ಆಡುತ್ತಿದೆ. ಇಂದು ಒಂದೇ ದಿನ ಎರಡೆರಡು ರೀತಿಯಲ್ಲಿ ಚಿನ್ನದ ಬೆಲೆ ಬದಲಾವಣೆಯಾಗಿದೆ. ಇದೇ ರೀತಿ ಮೇ 12ರಂದು ಕೂಡ ನಡೆದಿತ್ತು. ಇದೀಗ ಮತ್ತೆ ಈ ಸಂಪ್ರದಾಯ ಇಂದು ಕೂಡ ಮುಂದುವರೆದಿದೆ. ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ವಾತಾವರಣದ ನಡುವೆ ಚಿನ್ನದ ಬೆಲೆ ಒಮ್ಮೆ ಕೊಂಚ ಬೆಲೆಯಲ್ಲಿ ಇಳಿಕೆಯಾದರೆ, ಮತ್ತೊಂದು ದಿನ ಭಾರಿ ಬೆಲೆಯಲ್ಲಿ ಏರಿಕೆಯಾಗುತ್ತದೆ. ಇದು ಹೂಡಿಕೆದಾರರಲ್ಲಿ ಗೊಂದಲ ಸೃಷ್ಟಿಸಿದೆ.

ಇನ್ನು ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವೆಂದರೆ ಭಾರತೀಯರಿಗೆ ಅಚ್ಚು ಮೆಚ್ಚು. ಒಂದು ಹಂತದಲ್ಲಿ ದೊಡ್ಡ ಮಟ್ಟದ ಸಂಪತ್ತು ಎಂತಲೂ ಹೇಳಬಹುದು. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,805 ಆಗಿದೆ. ನಿನ್ನೆ ಇದರ ಬೆಲೆ ₹8,855 ಆಗಿದ್ದು ನಿನ್ನೆಗಿಂತ ಇಂದು, ₹50 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹88,050 ಆಗಿದೆ. ನಿನ್ನೆಯ ಬೆಲೆ ₹88,550 ಆಗಿದ್ದು ನಿನ್ನೆಗಿಂತ ಇಂದಿಗೆ ₹500 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹8,80,500 ರೂ. ಆಗಿದೆ. ನಿನ್ನೆಯ ಬೆಲೆ ₹8,85,500 ಆಗಿದ್ದು ನಿನ್ನೆಗಿಂತ ಇಂದು ₹5,000 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,606 ಆಗಿದೆ. ನಿನ್ನೆ ಇದರ ಬೆಲೆ ₹9,660 ಆಗಿದ್ದು ನಿನ್ನೆಗಿಂತ ಇಂದು, ₹54 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹96,060 ಆಗಿದೆ. ನಿನ್ನೆಯ ಬೆಲೆ ₹96,600 ಆಗಿದ್ದು ನಿನ್ನೆಗಿಂತ ಇಂದಿಗೆ ₹540 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,60,600 ಆಗಿದೆ. ನಿನ್ನೆಯ ಬೆಲೆ ₹9,66,000 ಆಗಿದ್ದು ನಿನ್ನೆಗಿಂತ ಇಂದು ₹5,400 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,204 ಆಗಿದೆ. ನಿನ್ನೆ ಇದರ ಬೆಲೆ ₹7,245 ಆಗಿದ್ದು ನಿನ್ನೆಗಿಂತ ಇಂದು, 41 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹72,040 ಆಗಿದೆ. ನಿನ್ನೆಯ ಬೆಲೆ ₹72,450 ಆಗಿದ್ದು ನಿನ್ನೆಗಿಂತ ಇಂದಿಗೆ 410 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,20,400 ರೂ. ಆಗಿದೆ. ನಿನ್ನೆಯ ಬೆಲೆ ₹7,24,500 ಆಗಿದ್ದು ನಿನ್ನೆಗಿಂತ ಇಂದು 4,100 ರೂ. ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ:
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೂ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,805 ಆಗಿದ್ದು, ₹50 ಕುಸಿತ ಕಂಡಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,606 ಆಗಿದೆ. ನಿನ್ನೆ ಇದರ ಬೆಲೆ ₹9,660 ಆಗಿದ್ದು ನಿನ್ನೆಗಿಂತ ಇಂದು, ₹54 ಕುಸಿತ ಕಂಡಿದೆ. 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,204 ಆಗಿದೆ. ನಿನ್ನೆ ಇದರ ಬೆಲೆ ₹7,245ಆಗಿದ್ದು ನಿನ್ನೆಗಿಂತ ಇಂದು, 41 ರೂ. ಕುಸಿತ ಕಂಡಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,805 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,606 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,255 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,805 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,606 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,204 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,820 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,621 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,217 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,805 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,606 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,204 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,805 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,606 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,204 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,805 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,606 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,204 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,805 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,606 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,204 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,810 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,611 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,208 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,810 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,611 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,208 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಆದರೆ ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲಿ ಕಂಡುಬಂದಿಲ್ಲ. ಬೆಳ್ಳಿ ಬೆಲೆಯು ನಿನ್ನೆ ಎಷ್ಟಿತ್ತೋ ಅಷ್ಟನ್ನೇ ಕಾಯ್ದಿರಿಸಿಕೊಂಡಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹97.90 ಆಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹979 ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,790 ಆಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹97,900 ಆಗಿದೆ. ಈ ಬೆಲೆ ನಿನ್ನೆಯಂತೆಯೇ ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಇಂದು..ಎಂದರೆ ಮೇ 14ರಂದು ಸ್ಪಾಟ್ ಗೋಲ್ಡ್ ಬೆಲೆ 0.7% ರಷ್ಟು ಇಳಿಕೆಯಾಗಿರುವುದನ್ನು ಸೂಚಿಸುತ್ತದೆ. ಅಂದರೆ ಇದು ಪ್ರತಿ ಔನ್ಸ್‌ಗೆ $3,226.11 ವಹಿವಾಟು ನಡೆಸಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications