ಮೇ 7, ಭಾರತದಲ್ಲಿ ಇಂದು ಚಿನ್ನದ ಬೆಲೆ: ಚಿನ್ನಪ್ರಿಯರಿಗೆ ಇಂದು ಕೂಡ ಕಹಿಸುದ್ದಿ ಸಿಕ್ಕಿದೆ. ಅದೇನೆಂದರೆ ಚಿನ್ನದ ಬೆಲೆ ಇಳಿಕೆಗೆ ಕಾಯುತ್ತಿದ್ದವರಿಗೆ ನಿರಾಸೆಯಾಗಿದ್ದು, ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ. ಪ್ರತಿ ಗ್ರಾಂ ಚಿನ್ನವೂ ಹತ್ತು ಸಾವಿರದ ಆಸುಪಾಸಿನಲ್ಲಿದೆ. ಹೀಗಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಆಸಕ್ತಿ ಹೊಂದಿರುವವರಿಗೆ ದೊಡ್ಡ ನಿರಾಸೆಯಾಗಿದೆ. ಅಲ್ಲದೇ ಗೊಂದಲ ಮನೆ ಮಾಡಿದೆ. ಚಿನ್ನವು ಒಂದು ಭದ್ರ ಸಂಪತ್ತಾಗಿದ್ದು, ಅದನ್ನು ಹೂಡಿಕೆ ಸಾಧನವನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,075 ಇದೆ.ಅಂದರೆ ನಿನ್ನೆ ₹9,025 ಆಗಿದ್ದು ಇಂದು ₹50 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ 90 ಸಾವಿರದ 750 ರೂ. ಇದೆ. ಅಂದರೆ ನಿನ್ನೆ 90 ಸಾವಿರದ 250 ರೂ. ಆಗಿದ್ದು ಇಂದು ₹500 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 7 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 2 ಸಾವಿರದ 500 ರೂ. ಆಗಿದ್ದು ಇಂದು ₹5,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,900 ಇದೆ. ಅಂದರೆ ನಿನ್ನೆ ₹9,846 ಆಗಿದ್ದು ಇಂದು ₹54 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 99 ಸಾವಿರ ರೂ. ಇದೆ. ಅಂದರೆ ನಿನ್ನೆ 98 ಸಾವಿರದ 460 ರೂ. ಆಗಿದ್ದು ಇಂದು ₹540 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 90 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 84 ಸಾವಿರದ 600 ರೂ. ಆಗಿದ್ದು ಇಂದು ₹5,400 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,425 ಇದೆ. ಅಂದರೆ ನಿನ್ನೆಯ ಬೆಲೆ ₹7,384 ಆಗಿದ್ದು ಇಂದು ಪ್ರತಿ ಗ್ರಾಂಗೆ ₹41 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73 ಸಾವಿರದ 840 ರೂ. ಇದೆ. ಅಂದರೆ ನಿನ್ನೆಯ ಬೆಲೆ 73 ಸಾವಿರದ 250 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ 410 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 42 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 38 ಸಾವಿರದ 400 ರೂ. ಆಗಿದ್ದು ಇಂದು ₹4,100 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,455 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,425 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,090 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,915 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,455 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,455 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,455 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,455 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,075 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,900 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,455 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,080 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,905 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,429 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,080 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,905 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,429 ಆಗಿದೆ.
ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು ಒಂದು ಗ್ರಾಂ ಬೆಳ್ಳಿಗೆ ಇದ್ದು ₹99 ನಿನ್ನೆ ಈ ಬೆಲೆ ₹96.90 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹2.10 ರಷ್ಟು ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ ₹990 ಇದ್ದು ನಿನ್ನೆ ಈ ಬೆಲೆ ₹969 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹21 ರಷ್ಟು ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ₹9,900 ಇದ್ದು ನಿನ್ನೆ ಈ ಬೆಲೆ ₹9,690 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹210 ರಷ್ಟು ಇಳಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಗೆ ₹99,000 ಇದ್ದು ನಿನ್ನೆ ಈ ಬೆಲೆ ₹96,900 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹2,100 ರಷ್ಟು ಇಳಿಕೆಯಾಗಿದೆ.
ಭಾರತ ದೇಶದಲ್ಲಿ ಚಿನ್ನಕ್ಕೆ ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಹಾಗೂ ದೊಡ್ಡ ಮಟ್ಟದ ಸಂಪತ್ತು ಎಂದು ಕೂಡ ಪರಿಗಣಿಸಲಾಗುತ್ತದೆ. ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಇಂದು (ಮೇ 7, 2025) ಸ್ಪಾಟ್ ಗೋಲ್ಡ್ ಬೆಲೆಯು ಇಳಿಮುಖವಾಗಿದೆ. 1.3%ರಷ್ಟು ಇಳಿಕೆಯಾಗಿರುವ ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ $3,383.88ರಷ್ಟು ವಹಿವಾಟು ನಡೆಸಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications