ಚಿನ್ನದ ಬೆಲೆಯು ಮತ್ತೆ ಸಾರ್ವಕಾಲಿಕವಾಗಿ ಏರಿಕೆಯನ್ನು ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಾಗೂ ದೇಶೀಯವಾಗಿ ಚಿನ್ನವು ದುಬಾರಿಯಾಗುತ್ತಾ ಸಾಗುತ್ತಿದೆ. ಕಳೆದ ಮೂರು ದಿನದಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಕೆಯಾಗಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನದ ದರವು 62,000 ರೂಪಾಯಿಗೆ ಏರಿಕೆಯಾಗಿದೆ. ಕಳೆದ 3 ದಿನಗಳಲ್ಲಿ 24 ಕ್ಯಾರೆಟ್ ಚಿನ್ನದ ದರವು 1640 ರೂಪಾಯಿಯಷ್ಟು ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗುರುವಾರ ಚಿನ್ನದ ಬೆಲೆಯು ಸಾರ್ವಕಾಲಿಕವಾಗಿ ಏರಿಕೆಯಾಗಿದೆ. ಶುಕ್ರವಾರವು ಕೂಡಾ ಚಿನ್ನದ ದರವು ಏರಿಎಕಯಾಗಿದೆ. ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಈ ಹಿಂದೆ ಏಪ್ರಿಲ್ 29ರಂದು ಬಂಗಾರ ದರವು ಕೊಂಚ ಏರಿಕೆಯಾಗಿದೆ. ಅದಾದ ಬಳಿಕ ಮೇ 3, 4, 5ರಂದು ಸತತ 3 ದಿನವು ಬಂಗಾರ ದರ ಹೆಚ್ಚಳ ಕಂಡಿದೆ. ಮೇ 5ರಂದು ಹತ್ತು ಗ್ರಾಂ ಚಿನ್ನದ ದರವು 57,000 ರೂಪಾಯಿಯಿಂದ 57,200 ರೂಪಾಯಿಗೆ ಏರಿಕೆಯಾಗಿದೆ.

ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 62,180 ರೂಪಾಯಿಯಿಂದ 62,400 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರವು ಕೂಡಾ ಇಂದು ಏರಿಕೆಯಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಅದರಲ್ಲೂ ಬೆಳ್ಳಿ ದರವು ಕಳೆದ 4 ದಿನಗಳಲ್ಲಿ ಒಟ್ಟಾಗಿ 2250 ರೂಪಾಯಿಯಷ್ಟು ಏರಿಕೆ ಕಂಡಿದೆ. ಪ್ರಮುಖವಾಗಿ ಇದು ಮದುವೆ ಸೀಸನ್ ಆದ ಕಾರಣದಿಂದಾಗಿ ಹಳದಿ ಲೋಹಕ್ಕೆ ಬೇಡಿಕೆ ಅಧಿಕವಾಗಿ ದರವು ಕೂಡಾ ಅಧಿಕವಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 1 ಬಾರಿ ಇಳಿದಿದೆ. 1 ಬಾರಿ ಸ್ಥಿರತೆ ಕಾಯ್ದುಕೊಂಡಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 2 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಮೇ 5ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 57,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 62,400 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ 1,150 ರೂಪಾಯಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 78,250 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 5ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 61345.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 77943.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.49ರಷ್ಟು ಕುಗ್ಗಿದ್ದು 2,039.77 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.61ರಷ್ಟು ಇಳಿಕೆಯಾಗಿದ್ದು 25.91 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 57,250 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 62,450 ರೂಪಾಯಿ (+220 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 57,200 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 62,400 ರೂಪಾಯಿ (+220 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 57,350 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 62,550 ರೂಪಾಯಿ (+220 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 57,200 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 62,400 ರೂಪಾಯಿ (+220 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 57,250 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 62,450 ರೂಪಾಯಿ (+220 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 57,250 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 62,450 ರೂಪಾಯಿ (+220 ರೂಪಾಯಿ)


Click it and Unblock the Notifications