Gold Price: ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.ಚಿನ್ನದ ಜೊತೆಗೆ ಬೆಳ್ಳಿಯ ಬೆಲೆ ಸಹ ಏರಿಕೆ ಕಂಡಿದೆ. ಚಿನ್ನದ ಖರೀದಿದಾರರಿಗೆ ಸಂಕ್ರಾತಿಗೆ ಚಿನ್ನದ ಬೆಲೆಯು ಶಾಕ್ ನೀಡಿದೆ.ಹಾಗಿದ್ರೆ ಭಾರತದಲ್ಲಿ ಶುಕ್ರವಾರ (ಜ.10) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ
ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಏರಿಕೆಯಾಗಿರುವುದರಿಂದ ಆಭರಣ ಪ್ರಿಯರಿಗೆ ನಿರಾಸೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,850 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ 79,470ರೂಪಾಯಿ ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಬಂಗಾರದ ಬೆಲೆ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಭಾರತದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?
ಇಂದು ಭಾರತದಲ್ಲಿ ಚಿನ್ನದ ದರ ಇಂದು ಕಡಿಮೆಯಾಗಿದೆ. ಪ್ರಸ್ತುತ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,285 ರೂಪಾಯಿ ಇದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 7,882 ರೂ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 72,850 ಇಂದು ರೂಪಾಯಿ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ79,470 ರೂ ಇದೆ.
ಇಂದು 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,28,500ರೂ ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 7,94,700 ರೂ.ಗಳ ವಹಿವಾಟುವಿದೆ.ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನದಲ್ಲಿ 2,700 ಏರಿಕೆ ಕಂಡಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 59,610 ರೂ ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟಿದೆ?
ಬೆಳ್ಳಿಯ ಬೆಲೆಯಲ್ಲಿ ಇಂದು ಭಾರತದಲ್ಲಿ ಇಂದು ಏರಿಕೆ ಕಂಡಿದೆ.ಬೆಳ್ಳಿಯ ಬೆಲೆ ಈಗ ಪ್ರತಿ ಕಿಲೋಗ್ರಾಂಗೆ 93,500 ರೂಪಾಯಿಗಳ ವಹಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 93.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 935 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,350 ರೂ ಗಳು ಇದೆ. ಇಂದು ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ ಶೇ.0.2ನಷ್ಟು ಏರಿಕೆಯಾಗಿ 78,264ರೂ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು.
MCX ಸಿಲ್ವರ್ ರೇಟ್ ಹೇಗಿದೆ?
ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು ಶೇ.0.31ನಷ್ಟು ಏರಿಕೆಯಾಗಿ 91,995 ರೂಪಾಯಿ ವಹಿವಾಟು ನಡೆಸುತ್ತಿದೆ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು. ನಾಲ್ಕು ವಾರಗಳಲ್ಲಿ ಚಿನ್ನದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗರಿಷ್ಠ ಮಟ್ಟವನ್ನ ತಲುಪಿದೆ. ರಾಯಿಟರ್ಸ್ ವರದಿ ಪ್ರಕಾರ ನವೆಂಬರ್‌ನ ಮಧ್ಯ ತಿಂಗಳಿನಿಂದ ಇಲ್ಲಿಯವರೆಗೆ ಹೋಲಿಕೆ ಮಾಡಿದರೆ ಈ ವಾರ ಹಳದಿ ಲೋಹ ಉತ್ತಮ ಓಟವನ್ನ ಮುಂದುವರೆಸಿದೆ. ಇಂದು ಯುಎಸ್ ಉದ್ಯೋಗ ದತ್ತಾಂಶಗಳು ಪ್ರಕಟವಾಗಲಿದ್ದು ಜಾಕತಿಕವಾಗಿ ಎಲ್ಲರ ಗಮನ ಆ ದತ್ತಾಂಶದ ಮೇಲೆ ಇದೆ. ಮುಂಬರುವ ದಿನಗಳಲ್ಲಿ ಯುಎಸ್ ಪೆಡರಲ್ ರಿಸರ್ವ್‌ನ ಬಡ್ಡಿದರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಯುಎಸ್ ಡಾಲರ್ ಏರಿಕೆಯಿಂದಾಗಿ ಇಂದು ಚಿನ್ನದ ದರ ಕೂಡ ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ರೇಟ್ ?
ಸ್ಪಾಟ್ ಚಿನ್ನದ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ. ಯುಎಸ್ ಡಾಲರ್ ಏರಿಕೆಯಿಂದಾಗಿ ಇದು ಸ್ಪಾಟ್ ಚಿನ್ನದ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಇನ್ನು ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 0.18% ರಷ್ಟು ಏರಿಕೆಯಾಗಿ 2,672.79 ಡಾಲರ್ ತಲುಪಿದೆ. ಇತ್ತ ಸ್ಪಾಟ್ ಬೆಳ್ಳಿ ಪ್ರತಿ ಔನ್ಸ್‌ಗೆ 0.33% ಏರಿಕೆಯಾಗಿ 30.23 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.83%ರಷ್ಟು ಏರಿಕೆಯಾಗಿ 969.25 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 1.67% ರಷ್ಟು ಏರಿಕೆಯಾಗಿ 944.00 ಡಾಲರ್ ತಲುಪಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22 ಕ್ಯಾರೆಟ್ | 24k ಕ್ಯಾರೆಟ್ |
| ಬೆಂಗಳೂರು | 7,285 | 7,947 |
| ಚೆನ್ನೈ | 7,285 | 7,947 |
| ಮುಂಬೈ | 7,285 | 7,947 |
| ದೆಹಲಿ | 7,300 | 7,962 |
| ಕೋಲ್ಕತಾ | 7,285 | 7,947 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು: 9,350ರೂ
ಚೆನ್ನೈ: 10,100ರೂ
ಮುಂಬೈ:9,350 ರೂ
ದೆಹಲಿ: 9,350 ರೂ
ಕೋಲ್ಕತಾ: 9,350 ರೂ
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications